News Karnataka Kannada
Tuesday, April 30 2024
ಮೈಸೂರು

ಮೈಸೂರಿನ ಅರಮನೆ ಅಂಗಳದಲ್ಲಿ ಯೋಗಕ್ಕೆ ಸಿದ್ದತೆ

Preparations for Yoga in Mysore Palace Grounds
Photo Credit : By Author

ಮೈಸೂರು: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಮುಡಾ ಮತ್ತು ಯೋಗ ಫೆಡರೇಷನ್ ಆಫ್ ಮೈಸೂರು ಸಹಯೋಗದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಜೂ.21ರಂದು ನಗರದ ಅರಮನೆ ಮುಂಭಾಗ ಯೋಗ ನಡೆಸಲಾಗುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಈ ಬಾರಿ 15 ಸಾವಿರ ಜನರು ಸೇರುವ ನಿರೀಕ್ಷೆಯಿದೆ. ಯೋಗ ಪ್ರದರ್ಶನದಲ್ಲಿ ದಾಖಲೆ ಮಾಡುವ ಕಸರತ್ತು ಈ ಸಲ ಇಲ್ಲ. ಸರಳ ಮತ್ತು ಸಾಂಕೇತಿವಾಗಿ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಯೋಗ ಪ್ರದರ್ಶನಕ್ಕೆ ಅಂತಿಮ ಹಂತದ ಎಲ್ಲ ಸಿದ್ದತೆ ಪೂರ್ಣಗೊಂಡಿದೆ. ಯೋಗ ದಿನಾಚರಣೆಯ ಯಶಸ್ವಿಗಾಗಿ ಜಿಲ್ಲಾಡಳಿತ ಈಗಾಗಲೇ ಯೋಗ ಒಕ್ಕೂಟ ಹಾಗೂ ವಿವಿಧ ಯೋಗ ಸಂಸ್ಥೆಗಳ ಮುಖಂಡರೊಂದಿಗೆ ಮೂರು ನಾಲ್ಕು ಬಾರಿ ಸಭೆ ನಡೆಸುವ ಮೂಲಕ ಯೋಗ ಪ್ರದರ್ಶನ ಯಶಸ್ವಿಗೆ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದಾರೆ.

ಜಿಲ್ಲಾಡಳಿತದ ಮನವಿ ಮೇರೆಗೆ ಒಂದು ವಾರಕ್ಕೂ ಹೆಚ್ಚು ಕಾಲ ವಿವಿಧ ಶಾಲಾ-ಕಾಲೇಜುಗಳಲ್ಲಿ ಯೋಗಪಟುಗಳಿಂದ ಯೋಗ ಪ್ರದರ್ಶನದ ತರಬೇತಿಯನ್ನು ನೀಡಲಾಗಿದೆ. ಯೋಗ ದಿನಾಚರಣೆಯ ಶಿಷ್ಟಾಚಾರದಂತೆ ಸಾರ್ವಜನಿಕರಿಗೆ, ಯೋಗಪಟುಗಳಿಗೆ ಯೋಗ ತರಬೇತಿ ಜತಗೆ ಯೋಗಾಸನದ ಬಗ್ಗೆ ಮಾಹಿತಿ ಕೊಡುವ ಮೂಲಕ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಒಂದೂಕಾಲು ಗಂಟೆಯಲ್ಲಿ ಇಡೀ ಕಾರ್ಯಕ್ರಮ ಪೂರ್ಣಗೊಳ್ಳಲಿದೆ. ಸಭಾ ಕಾರ್ಯಕ್ರಮಕ್ಕೆ 30 ನಿಮಿಷ ಮತ್ತು ಯೋಗ ಪ್ರದರ್ಶನಕ್ಕೆ 45 ನಿಮಿಷ ಸಮಯ ನಿಗದಿ ಮಾಡಲಾಗಿದೆ. ಬೆಳಗ್ಗೆ 6.30ರಿಂದ 8ರವರೆಗೆ ಯೋಗ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ಟಿ.ಎಸ್.ಶ್ರೀವತ್ಸ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಬಳಿಕ ಶಂಖನಾದದೊಂದಿಗೆ ಪ್ರಾರಂಭಗೊಂಡ ಯೋಗ ಪ್ರದರ್ಶನ ಆರಂಭಗೊಂಡು ಧ್ಯಾನ ದೊಂದಿಗೆ ಅಂತ್ಯಗೊಳ್ಳಲಿದೆ. ಅರಮನೆ ಅಂಗಳದಲ್ಲಿ ಮೊದಲಿಗೆ ಶಂಕನಾದದಿಂದ ಯೋಗ ಆರಂಭವಾಗಲಿದೆ. ನಂತರ ಪ್ರಾರ್ಥನೆ ನಡೆಯಲಿದೆ. ಬಳಿಕ ದೇಹವನ್ನು ಸಡಿಲ ಮಾಡುವ ಅಭ್ಯಾಸ ನಡೆಯಲಿದೆ. ತದನಂತರ 19 ಆಸನ ನಡೆಯಲಿದೆ. ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ-1, ಪಾದಹಸ್ತಾಸನ-2, ಅರ್ಧಚಕ್ರಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನದ ಪ್ರದರ್ಶನ ನಡೆಯಲಿದೆ. ಬಳಿಕ ಕಪಾಲಭಾತಿ, ನಾಡಿಶೋಧನ ಪ್ರಾಣಾಯಾಮ, ಶೀತಲೀ ಪ್ರಾಣಾಯಾಮ, ಭ್ರಾಮರೀ ಪ್ರಾಣಾಯಾಮ, ಧ್ಯಾನ ಮತ್ತು ಸಂಕಲ್ಪ ನಡೆಯಲಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು