News Karnataka Kannada
Wednesday, May 08 2024
ಮೈಸೂರು

ಇಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

President Draupadi Murmu to visit Mysuru today
Photo Credit : By Author

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆ.5ರಂದು ಮಧ್ಯಾಹ್ನ 12.30ಕ್ಕೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಮಧುಮಲೈಗೆ ನಿರ್ಗಮಿಸುವರು. ನಂತರ ಸಂಜೆ 5.45 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ನಿರ್ಗಮಿಸುವರು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ರಾಷ್ಟ್ರಪತಿಯವರು ಆಗಮಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಶಿಷ್ಟಾಚಾರದ ಪ್ರಕಾರ ಎಲ್ಲಾ ರೀತಿಯ ಕ್ರಮಕೈಗೊಳ್ಳಬೇಕು. ಗೊಂದಲಕ್ಕೆ ಆಸ್ಪದ ಇಲ್ಲದಂತೆ ಇಲಾಖೆಗಳು ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು. ಆಹಾರ ಸುರಕ್ಷತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ರೂಮ್‌ಗಳ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ ಹಾಗೂ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು