ಮೈಸೂರು: ರೌಡಿ ಶೀಟರ್ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಇದೀಗಾ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನ.1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ಜನರ ಆಕ್ರೋಶಕ್ಕೆ ಕಾರಣವಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ರಾಜ್ಯೋತ್ಸವ ಪ್ರಶಸ್ತಿಯನ್ನು ಹಿಂಪಡೆಯಲಾಗುತ್ತೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರು ತಿಳಿಸಿದ್ದಾರೆ. ಕೊನೆ ಕ್ಷಣದಲ್ಲಿ ಪ್ರಶಸ್ತಿಗೆ ಹೆಸರು ಸೇರ್ಪಡೆಯಾಗಿತ್ತು. ಪೊಲೀಸರಿಂದ ಆತನ ಹಿನ್ನೆಲೆ, ಮಾಹಿತಿ ಪಡೆಯಲು ತಡವಾಯಿತು. ಇದೀಗಾ ಆತ ರೌಡಿ ಶೀಟರ್ ಎಂಬುದು ತಿಳಿದು ಬಂದಿದೆ. ಈ ಕಾರಣದಿಂದ ರೌಡಿ ಶೀಟರ್ ಅಶೋಕ್ಗೆ ನೀಡಲಾಗಿದ್ದ ಪ್ರಶಸ್ತಿಯನ್ನ ವಾಪಸ್ಸು ಪಡೆಯಲಾಗುತ್ತೆ ಎಂದು ತಿಳಿಸಿದ್ದಾರೆ.