Categories: ಮೈಸೂರು

ಶೀಘ್ರವೇ ಬಿಜೆಪಿಯಲ್ಲಿನ ಬಂಡಾಯ ಶಮನ: ಬಿ.ವೈ.ವಿಜಯೇಂದ್ರ

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಸಂಬಂಧ ಭುಗಿಲೆದ್ದಿರುವ ಬಂಡಾಯ ಶೀಘ್ರವೇ ಶಮನವಾಗಲಿದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಹೊರಹಾಕಿದ್ದಾರೆ.

ಮೈಸೂರಿಗೆ ಆಗಮಿಸಿ ಪಕ್ಷದ ಮುಖಂಡರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಪಕ್ಷದ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಟಿಕೆಟ್ ವಿಚಾರವಾಗಿ ಕೆಲವೆಡೆ ಬಂಡಾಯವಿದೆ. ಪಕ್ಷದ ಎಲ್ಲ ನಿರ್ಧಾರಗಳನ್ನು ವಿಜಯೇಂದ್ರ, ಯಡಿಯೂರಪ್ಪ ತೆಗೆದುಕೊಳ್ಳಲು ಸಾಧವಿಲ್ಲ. ಪಕ್ಷದ ಹೈ ಕಮಾಂಡ್ ನಿರ್ಧಾರಗಳೇ ಅಂತಿಮ.

ಪಕ್ಷ ನಮ್ಮ ಮಾತು ಕೇಳಿಕೊಂಡು ಎಲ್ಲವನ್ನೂ ನಿರ್ಧಾರ ಮಾಡುತ್ತಿಲ್ಲ. ಪಕ್ಷದ ಹೈಕಮಾಂಡ್‌ಗೆ ಮತ್ತು ನಾಯಕರಿಗೆ ಎಲ್ಲವೂ ಗೊತ್ತಿದೆ. ಹೀಗಾಗಿ ಖುದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಎಲ್ಲ ಕಡೆ ಹೋಗಿ ಭಿನ್ನಮತ ಶಮನ ಮಾಡುತ್ತಾರೆ. ಶಿವಮೊಗ್ಗ ಸೇರಿದಂತೆ ಎಲ್ಲಾ ಬಂಡಾಯವೂ ಬಗೆಹರಿಯಲಿದ್ದು, ಇನ್ನು ನಾಲ್ಕೇ ದಿನದಲ್ಲಿ ಆ ಮ್ಯಾಜಿಕ್ ಆಗುತ್ತದೆ ನೋಡ್ತಾ ಇರಿ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ನರೇಂದ್ರ ಮೋದಿ ಪರ ಅಲೆ ಇದೆ. ಜತೆಗೆ ಮೋದಿ ನೇತೃತ್ವದಲ್ಲಿ ಕೆಲಸ ಮಾಡಲು ಪPದ ಎಲ್ಲಾ ನಾಯಕರು ಒಂದಾಗಿ ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಅಲೆಗೆ ಕಾಂಗ್ರೆಸ್ ಸರ್ಕಾರ ಭಯಗೊಂಡಿದೆ. ಹೀಗಾಗಿಯೇ ಡಜನ್‌ ಗಟ್ಟಲೇ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೆ ಸರಿದಿದ್ದಾರೆ. ಸೋಲುವ ಭೀತಿಯಿಂದ ಯಾವೊಬ್ಬ ಸಚಿವರು ಸ್ಪರ್ಧಿಸಲು ಮುಂದೆ ಬರುತ್ತಿಲ್ಲ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು 18 ಸಚಿವರನ್ನು ಕಣಕ್ಕಿಳಿಸಲು ಮುಂದಾಗಿದ್ದರು. ಆದರೆ, ಆ ಸಚಿವರು ಮೋದಿ ಅಲೆಗೆ ಹೆದರಿ ಸ್ಪರ್ಧೆ ಮಾಡಿಲ್ಲ. ಅವರಿಗೆ ಸೋಲುವ ಭೀತಿ ಕಾಡುತ್ತಿದೆ ಎಂದು ಲೇವಡಿ ಮಾಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯಾಗಿರುವುದು ಕಾಂಗ್ರೆಸ್‌ಗೆ ಪ್ಲಸ್ ಆಗಲಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾವುದು ಪ್ಲಸ್, ಯಾವುದು ಮೈನಸ್ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್‌ ನವರು ಈ ರೀತಿಯಾಗಿ ಹೇಳಿಕೆ ಕೊಡುತ್ತಿದ್ದಾರೆ. ನಾವೆಲ್ಲರೂ ಸಮನ್ವಯತೆಯಿಂದಲೇ ಚುನಾವಣೆ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭ ಚಾಮರಾಜನಗರ ಬಿಜೆಪಿ ಅಭರ್ಥಿ ಎಸ್.ಬಾಲರಾಜ್, ಮಾಜಿ ಸಚಿವರಾದ ಎಸ್.ಎ.ರಾಮದಾಸ್, ಎನ್.ಮಹೇಶ್, ರಾಜ್ಯ ಬಿಜೆಪಿ ಉಪಾಧಕ್ಷ ರಾಜೇಂದ್ರ, ನಗರಾಧಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧಕ್ಷ ಎಲ್.ಆರ್.ಮಹದೇವಸ್ವಾಮಿ ಸೇರಿದಂತೆ ಅನೇಕರು ಇದ್ದರು.

Ashika S

Recent Posts

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

8 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

14 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

17 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

32 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

38 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

1 hour ago