ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ: ಪರಿಸರವಾದಿಗಳ ಆಕ್ರೋಶ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ರೋಪ್‌ವೇ ಯೋಜನೆಗೆ ಪೂರ್ವಭಾವಿ ಅಧ್ಯಯನ ನಡೆಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಸ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು ಸಾಂಸ್ಕೃತಿಕ ನಗರಿಯ ನೂರಾರು ಪರಿಸರ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದೆ.

ಸಚಿವ ನಿತಿನ್ ಗಡ್ಕರಿ,  ರಾಜ್ಯ ಸರ್ಕಾರವು ರೋಪ್‌ವೇಯ ಪ್ರಸ್ತಾವನೆಯನ್ನು ಸಲ್ಲಿಸಿತ್ತು  ಎಂದು‌ ಉತ್ತರ ನೀಡಿದ್ದು,  ಇದು ರೋಪ್‌ವೇ ಯೋಜನೆಯನ್ನು ಕೈಬಿಡಲಾಗಿದೆ ಎಂದು ಭಾವಿಸಿದ್ದ ಪ್ರಕೃತಿ ಪ್ರಿಯರನ್ನು ಬೆಚ್ಚಿಬೀಳಿಸಿದೆ. ಭಾರೀ ವಿರೋಧಕ್ಕೆ ಕಾರಣವಾಗಿದ್ದ ಈ ಯೋಜನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ರೋಪ್ ವೇ ಯೋಜನೆ ‘ಬೆಟ್ಟ’ವನ್ನು ಕಾಡುತ್ತಲೇ ಇರುವುದು ಪ್ರಜ್ಞಾವಂತರಲ್ಲಿ ಆತಂಕ ಮೂಡಿಸಿದೆ.

ಪರಿಸರ ಪ್ರೇಮಿಗಳ ವಿರೋಧ: 2022-23ನೇ ಸಾಲಿನ ಬಜೆಟ್‌ನಲ್ಲಿ ಯೋಜನೆ ಪ್ರಸ್ತಾಪವಾದ ಕೂಡಲೇ ಪರಿಸರ ಪ್ರೇಮಿಗಳು ಮತ್ತು ಸಾಮಾಜಿಕ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಚಾಮುಂಡಿಬೆಟ್ಟ ಉಳಿಸಿ ಸಮಿತಿ ರಚನೆಯಾಯಿತು. ವನ್ಯಜೀವಿ ತಜ್ಞರು, ಶಾಸಕರು, ಪರಿಸರವಾದಿಗಳು, ಎಂಜಿನಿಯರ್‌ಗಳು, ವಕೀಲರು, ರಾಜಕಾರಣಿಗಳು, ಸಾಹಿತಿಗಳು ಸೇರಿದಂತೆ ಹಲವರು ಈ ಸಮಿತಿ ಜೊತೆ ಕೈಜೋಡಿಸಿದರು. ಬೆಟ್ಟದಲ್ಲಿ ರೋಪ್ ವೇ ಬಂದರೆ ಏನೆಲ್ಲಾ ಅನಾಹುತಗಳಾಗುತ್ತವೆ ಎಂಬುದನ್ನೂ ತಜ್ಞರು ವಿವರವಾಗಿ ತೆರೆದಿಟ್ಟಿದ್ದರು.

ಯೋಜನೆ ವಿರೋಧಿಸಿ: 70 ಸಾವಿರ ಸಹಿ: ಯೋಜನೆಯ ವಿರುದ್ಧ ನಗರದ ವಿವಿಧ ಭಾಗಗಳಲ್ಲಿ 50,000 ಕ್ಕೂ ಹೆಚ್ಚು ಜನರಿಂದ ಆನ್‌ಲೈನ್ ಮತ್ತು ಭೌತಿಕವಾಗಿ 70,000 ಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸಲಾಗಿದೆ. ರೋಪ್ ವೇ ಇಲ್ಲದಿದ್ದರೂ ಅನೇಕ ಪ್ರವಾಸಿಗರು ಬೆಟ್ಟಗಳಿಗೆ ಭೇಟಿ ನೀಡುತ್ತಿದ್ದಾರೆ ಎಂಬುದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವೂ ನಡೆದಿದೆ.  ರೋಪ್‌ ವೇ ನಿರ್ಮಾಣದಿಂದ ಚಾಮುಂಡಿಬೆಟ್ಟದ  ಸೌಂದರ್ಯಕ್ಕೆ ಧಕ್ಕೆ ಬರುತ್ತದೆ.  ಎಂದು ಪರಿಸರ ಹೋರಾಟಗಾರ ಭಾಮಿ ವಿ.ಶೆಣೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಇದೆಲ್ಲದರ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ 2022ರ ಜುಲೈ 6ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿಯೂ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸುಮಾರು 1,673 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಈ ಬೆಟ್ಟವನ್ನುಶ್ರದ್ಧಾ ಕೇಂದ್ರವನ್ನಾಗಿಯೇ ಉಳಿಸಿಕೊಳ್ಳಬೇಕು; ‘ರೋಪ್ ವೇ’ ಯೋಜನೆ ಅಗತ್ಯವಿಲ್ಲ ಎಂಬ ಸ್ಪಷ್ಟ ಅಭಿಪ್ರಾಯ ವ್ಯಕ್ತವಾಗಿತ್ತು.

ಸಂಸದ ಶಾಸಕರ ವಿರೋಧ:  ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಕೂಡ ರೋಪ್‌ವೇ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜನರು ಬೆಟ್ಟಕ್ಕೆ ಬರುವುದು ಭಕ್ತಿಗಾಗಿಯೇ ಹೊರತು ಪ್ರವಾಸಕ್ಕಾಗಿ ಅಲ್ಲ. ಇದನ್ನು ಶ್ರದ್ಧೆ ಮತ್ತು ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿ ಉಳಿಸಿಕೊಳ್ಳಬೇಕು. ಪ್ರವಾಸೋದ್ಯಮ ಚಟುವಟಿಕೆಯನ್ನು ಅಭಿವೃದ್ಧಿಪಡಿಸಲು ಹಲವು ಸ್ಥಳಗಳಿವೆ. ಇದು ಇತರ ಬೆಟ್ಟಗಳಂತೆ ಅಲ್ಲ,  ಸೂಕ್ಷ್ಮ ಪ್ರದೇಶ ಎಂದು ಪ್ರತಾಪ್ ಹೇಳಿದ್ದಾರೆ. ಈ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದು ಯೋಜನೆ ಕೈಬಿಡಲಾಗುವುದು ಎಂದು ಜಿಲ್ಲಾ ಸಚಿವ ಸೋಮಶೇಖರ್ ತಿಳಿಸಿದ್ದಾರೆ.

ಆದರೆ, ಈ ಯೋಜನೆ ಕುರಿತು ಕೇಂದ್ರ ಸಚಿವರು ನೀಡಿರುವ ಹೇಳಿಕೆ ಯೋಜನೆ ಇನ್ನೂ ಜೀವಂತವಾಗಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಸಭೆಯ ನಿರ್ಣಯವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸಿಲ್ಲವೇ, ಹೀಗಿರುವಾಗ ಸಚಿವರೇ ಕಣ್ಣಾಮುಚ್ಚಾಲೆಯ ತಂತ್ರವಾಗಿ ಸಭೆ ನಡೆಸಿದ್ದಾರೆಯೇ ಎಂಬ ಪ್ರಶ್ನೆಗಳಿವೆ.

ಕೇಂದ್ರ ಸಚಿವರ ಹೇಳಿಕೆ ನಮ್ಮನ್ನು ಬೆಚ್ಚಿ ಬೀಳಿಸಿದೆ. ಎಂಬ ಆತಂಕವೂ ಉಂಟಾಗಿದೆ. ಚಾಮುಂಡಿ ಬೆಟ್ಟ ಸಂರಕ್ಷಣಾ ಸಮಿತಿಯು ಶೀಘ್ರವೇ ಸಭೆ ನಡೆಸಿ ಯೋಜನೆಗೆ ವಿರೋಧವಿರುವುದನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು,’’ ಎಂದು ಪರಿಸರ ಮತ್ತು ಚಾಮುಂಡಿ ಬೆಟ್ಟ ಉಳಿಸುವ ಸಮಿತಿಯ ಸಂಸ್ಥಾಪಕ ಸದಸ್ಯ ಪರಶುರಾಮೇಗೌಡ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತ ಮೇಜರ್ ಜನರಲ್ ಎಸ್.ಜಿ.ವೊಂಬತ್ಕೆರೆ ಮಾತನಾಡಿ, ಚಾಮಂಡಿ ಬೆಟ್ಟದ ಬಗ್ಗೆ ಸರ್ಕಾರ ತನ್ನ ಪ್ರವಾಸೋದ್ಯಮ ನೀತಿಯನ್ನು ಬದಲಾಯಿಸಬೇಕು. ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕು, ವಾಣಿಜ್ಯ ಮತ್ತು ಲಾಭದ ಉದ್ದೇಶಗಳಿಗೆ ಅಲ್ಲ ಎಂದರು.

ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾತನಾಡಿ, ರೋಪ್ ವೇ ನಿರ್ಮಾಣ ಕಾಮಗಾರಿ ವೇಳೆ ಭೂಮಿ ಸಡಿಲಗೊಂಡು ಬೆಟ್ಟದ ಪರಿಸರಕ್ಕೆ ಹಾನಿಯಾಗುವ ಸಂಭವವಿದ್ದು, ಯೋಜನೆ ಕೈಬಿಡಬೇಕು. ಪರಿಸರವಾದಿಗಳು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಅರ್ಥಪೂರ್ಣವಾಗಿದೆ. ಸರಕಾರ ಕುರುಡು ತಂತ್ರ ಅನುಸರಿಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ರೋಪ್ ವೇ ಯೋಜನೆಗೆ ಅವಕಾಶ ನೀಡುವುದಿಲ್ಲ. ನಾನು ಸೂಕ್ತ ವೇದಿಕೆಯಲ್ಲಿ ರದ್ದುಪಡಿಸಲು ಪ್ರಸ್ತಾಪಿಸುತ್ತೇನೆ ಎಂದು ಅವರು ಹೇಳಿದರು.

Gayathri SG

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 mins ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

33 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

50 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago