Categories: ಮೈಸೂರು

ಚಾಮುಂಡಿಬೆಟ್ಟಕ್ಕೆ ರೋಪ್ ವೇ ಪ್ರಸ್ತಾಪ ಕೈಬಿಡಲು ಆಗ್ರಹ

ಮೈಸೂರು: ನಗರದ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಿಸಬೇಕೆಂಬ ಪ್ರಸ್ತಾವವನ್ನು ಸರ್ಕಾರ ಶಾಶ್ವತವಾಗಿ ಕೈಬಿಡಬೇಕೆಂದು ಚಾಮುಂಡಿಬೆಟ್ಟ ಉಳಿಸಿ ಸಮಿತಿ ಆಗ್ರಹಿಸಿದೆ.

ಈ ಕುರಿತು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪರಶುರಾಮೇಗೌಡ ಮಾತನಾಡಿ, ಕಳೆದ ವರ್ಷದ ಜು.೬ರಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ರೋಪ್ ವೇ ಯೋಜನೆ ಕೈಬಿಡಲು ನಿರ್ಣಯ ಮಾಡಿದ್ದಾರೆ. ಚಾಮುಂಡಿ ಬೆಟ್ಟವನ್ನು ಪ್ರವಾಸಿಗರು ಗಿಜಿಗುಡುವ ಪ್ರವಾಸಿ ತಾಣವಾಗಿ, ವ್ಯಾಪಾರಿ ಕೇಂದ್ರ ಮಾಡದೆ, ಭಕ್ತರ ಧಾರ್ಮಿಕ ಕೇಂದ್ರವಾಗಿ ಮಾತ್ರ ಉಳಿಸಿಕೊಳ್ಳಲು ಪ್ರಾಧಿಕಾರ ರಚಿಸಬೇಕೆಂದರು.

ಈ ಪ್ರಾಧಿಕಾರದಲ್ಲಿ ಅರಣ್ಯ ಮತ್ತು ಪರಿಸರ ಖಾತೆಯ ಸಚಿವರು, ಭೂ ವಿಜ್ಞಾನಿ, ಪರಿಸರ ತಜ್ಞ, ಜಲ ತಜ್ಞ, ಪರಂಪರೆ ತಜ್ಞ, ಸಿವಿಲ್ ಇಂಜಿನಿಯರ್, ವನ್ಯಜೀವಿ ತಜ್ಞ ಇಂತವರು ಸದಸ್ಯರಾಗಿ ಇರಲಿ ಎಂದು ಸರ್ಕಾರಕ್ಕೆ ಮಾಡಿದ್ದ ನಮ್ಮ ಮನವಿಯನ್ನು ಕಡೆಗಣಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ನಮ್ಮ ಮನವಿ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕೆಂದು ಕೋರಿದರು.

ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆ ಬದಲಿಗೆ ಗಿಡಗಳನ್ನು ಬೆಳೆಸುವುದು, ಮಳೆ ನೀರು ಕೊಯ್ಲು, ಚರಂಡಿ ನೀರಿನ ಸರಿಯಾದ ನಿರ್ವಹಣೆ ಮತ್ತು ಜಲಮೂಲಗಳ ಸಂರಕ್ಷಣೆ ಮುಂತಾದ ಪರಿಸರ ಸ್ನೇಹಿ ಸುಸ್ಥಿರ ಅಭಿವೃದ್ಧಿ ಮಾಡಲು ಜನ ಪ್ರತಿನಿಧಿಗಳು ಮತ್ತು ಸರ್ಕಾರ ಮುಂದಾಗಬೇಕು. ಬೆಟ್ಟವನ್ನು ಕಾಂಕ್ರಿಟೀಕರಣ ಮಾಡದೆ ಸುಸ್ಥರಿ ಅಭಿವೃದ್ಧಿ ಮಾಡಬೇಕು ಎಂದು ಆಗ್ರಹಿಸಿದರು.

ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಚಾಮುಂಡಿಬೆಟ್ಟ ಏಕಶಿಲೆಯಿಂದ ನಿರ್ಮಾಣವಾಗಿರುವುದಲ್ಲ. ಅಭಿವೃದ್ಧಿ ಹೆಸರಿನಲ್ಲಿ ಕಾಮಗಾರಿ ಕೈಗೊಂಡರೆ ಬೆಟ್ಟ ಕುಸಿಯುತ್ತದೆ. ಈಗಾಗಲೇ ಕುಸಿದಿರುವ ರಸ್ತೆ ಸರಿಪಡಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ರೋಪ್ ನಿರ್ಮಿಸುವುದರಿಂದ ಬೆಟ್ಟ ಮೋಜಿ ಮಸ್ತಿಯ ತಾಣವಾಗುವುದಲ್ಲದೆ ಮತ್ತೆ ಕುಸಿಯುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ರೋಪ್‌ವೇ ನಿರ್ಮಿಸಬಾರದು ಎಂದು ಆಗ್ರಹಿಸಿದರು.

ಸಾಹಿತಿ ಹೊರೆಯಾಲ ದೊರೆಸ್ವಾಮಿ, ಸಮಿತಿಯ ಸದಸ್ಯರಾದ ಸುಮಲತಾ, ಲೀಲಾ ಶಿವಕುಮಾರ್, ಪೂರ್ಣಿಮಾ ಕೋಟಾ ಹಾಜರಿದ್ದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago