Categories: ಮೈಸೂರು

ಮೈಸೂರು: ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಮೈಸೂರು: ಹಾಡಹಗಲೇ ಮೈಸೂರಿನಲ್ಲಿ ನೆತ್ತರು ಹರಿದಿದ್ದು, ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ವಿ.ವಿ.ಪುರಂ ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು, ಕೊಲೆಯ ಆರೋಪಿ ಸ್ಥಾನದಲ್ಲಿದ್ದ ರೌಡಿಶೀಟರ್ ಚಂದ್ರು ಅಲಿಯಾಸ್ ಚಂದು ಹತ್ಯೆಗೀಡಾಗಿದ್ದಾನೆ. ಈತ ಒಂಟಿಕೊಪ್ಪಲು ನಿವಾಸಿಯಾಗಿದ್ದು, ಕಳೆದ ಕೆಲ ವರ್ಷಗಳ ಹಿಂದಷ್ಟೇ ನಡೆದಿದ್ದ ದೇವು ಕೊಲೆ ಪ್ರಕರಣದಲ್ಲಿ ಈತ ಕೂಡ ಆರೋಪಿಯಾಗಿದ್ದ. ಸಂಜೆ ಐದು ಗಂಟೆ ವೇಳೆಗೆ ಮನೆ ಬಳಿ ನಿಂತಿದ್ದ ಚಂದ್ರು ಅವರ ಎದುರಿಗೆ ಬೈಕಿನಲ್ಲಿ ಬಂದ ಯುವಕರ ಗುಂಪೊಂದು ಕ್ಷಣ ಮಾತ್ರದಲ್ಲಿ ಹತ್ಯೆ ಮಾಡಿ ಪರಾರಿಯಾಗಿದೆ. ಕೊಲೆ ಮಾಡಿದವರು ಯಾರು? ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.

ಜನನಿಬಿಡ ಪ್ರದೇಶದಲ್ಲಿ ಏಕಾಏಕಿ ನಡೆದ ಘಟನೆಯಿಂದ ಸುತ್ತಮುತ್ತಲಿನ ಅಂಗಡಿಗಳವರು ಹಾಗೂ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಅಲ್ಲದೆ, ಗಲಾಟೆ ಶುರು ಆಗುತ್ತಿದ್ದಂತೆ ಬಹುತೇಕರು ಹೆದರಿ ಜಾಗ ಖಾಲಿ ಮಾಡಿದ್ದಾರೆ. ಇದರಿಂದ ಹತ್ಯೆ ಆರೋಪಿಗಳು ಯಾವುದೇ ಆತಂಕವಿಲ್ಲದೆ ನಾಪತ್ತೆಯಾಗಿದ್ದಾರೆ.

ರೌಡಿಶೀಟರ್ ದೇವು ಹತ್ಯೆ ವೈಷಮ್ಯದ ಹಿನ್ನಲೆಯಲ್ಲಿ ಚಂದ್ರು ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಕೊಲೆಯಾದ ಚಂದ್ರು ನಗರಪಾಲಿಕೆ ಮಾಜಿ ಸದಸ್ಯ ಅವ್ವಾ ಮಹದೇಶ್ ನಿಕಟವರ್ತಿ ಎಂದು ಹೇಳಲಾಗಿದೆ. ಹತ್ಯೆಗೆ ಹತ್ಯೆಯೇ ಪರಿಹಾರ ಎಂಬ ಅಪಖ್ಯಾತಿಗೆ ಒಳಗಾಗಿರುವ ಪಡುವಾರಹಳ್ಳಿ ಹಾಗೂ ಒಂಟಿಕೊಪ್ಪಲು ಆಸುಪಾಸಿನಲ್ಲಿ ಗುರುವಾರ ನಡೆದ ಘಟನೆ ಇಡೀ ಬಡಾವಣೆಯನ್ನು ಆತಂಕಕ್ಕೀಡುಮಾಡಿದೆ.

ತಣ್ಣಗಿದ್ದ ಮೈಸೂರಿನಲ್ಲಿ ಮತ್ತೆ ಹತ್ಯಾಕಾಂಡವೊಂದು ನಡೆಯುವ ಮೂಲಕ ಮತ್ತೆ ರಕ್ತಪಾತ ಆರಂಭವಾಗುವ ಮುನ್ಸೂಚನೆ ಕಂಡುಬಂದಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿ.ವಿ.ಪುರಂ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದು, ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

Gayathri SG

Recent Posts

15 ವರ್ಷದಿಂದ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ: ಪ್ರದೀಪ್ ಈಶ್ವರ್

ಕಳೆದ 15 ವರ್ಷದಿಂದ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ ಎಂದು ಚಿಕ್ಕಬಳ್ಳಾಪುರದ ಶಾಸಕ…

1 min ago

ವರುಣನ ಆರ್ಭಟಕ್ಕೆ ಬೆಳೆ ನಷ್ಟ : ಬಿರುಗಾಳಿ ಮಳೆಗೆ ನೆಲಕಚ್ಚಿದ 8 ಎಕರೆ ಬಾಳೆ ಬೆಳೆ

ವರುಣ ಕ್ಷೇತ್ರದಲ್ಲಿ ವರುಣನ ಆರ್ಭಟಕ್ಕೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆಗೊನೆ…

14 mins ago

ಯೇನೆಪೋಯ ವಿಶ್ವ ವಿದ್ಯಾನಿಲಯದಲ್ಲಿ ಕೌಶಲ್ಯ ಮೌಲ್ಯಮಾಪನ ಕಾರ್ಯಾಗಾರ

ನರ್ಸಿಂಗ್ ಎಜುಕೇಶನ್ ವಿಭಾಗ, ಯೇನೆಪೋಯ ನರ್ಸಿಂಗ್ ಕಾಲೇಜು, ಹಾಗೂ ಯೇನೆಪೋಯ ವಿಶ್ವ ವಿದ್ಯಾನಿಲಯ, ಮಂಗಳೂರು. ಇದರ ಆಶ್ರಯದಲ್ಲಿ ದಿನಾಂಕ ೦೪.೦೫.೨೦೨೪…

17 mins ago

ಬೀದರ್ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ : ಸಾಗರ್ ಖಂಡ್ರೆ ಮನವಿ

'ಬೀದರ್ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿಯನ್ನು ಸಂಸತ್ತಿಗೆ ಗೆಲ್ಲಿಸಿ…

24 mins ago

ಪಕ್ಷಿಗಳ ದಾಹ ತಣಿಸುವ ಪರಿಸರ ಪ್ರೇಮಿ ರಿಯಾಜ್‌ ಪಾಶಾ

ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತಾಲ್ಲೂಕಿನ ಗಡಿ ಭಾಗದ ಜನ ಜಾನುವಾರುಗಳ ಜತೆ ಪ್ರಾಣಿ ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ. ತಾಲ್ಲೂಕಿನ…

42 mins ago

ಚಾಮುಂಡಿಬೆಟ್ಟದ ಪಾದದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಕೆ

ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಸೈನಿಕ ಅಕಾಡೆಮಿ  ವತಿಯಿಂದ ಶನಿವಾರ ಪ್ರಾಣಿ ಪಕ್ಷಿಗಳು,…

47 mins ago