Categories: ಮೈಸೂರು

ಹೆಚ್.ಡಿ.ಕೋಟೆ: ತಾ.ಪಂ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನ

ಮೈಸೂರು: ತಾಲೂಕು ಪಂಚಾಯಿತಿ ಕಚೇರಿಗೆ ಹೊಂದಿಕೊಂಡಿರುವ ವಸತಿಗೃಹದ ಆವರಣದಲ್ಲಿದ್ದ ಸುಮಾರು ಮೂವತ್ತು ವರ್ಷದ ಹಳೆಯ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ಕಡಿದು ಹೊತ್ತೊಯ್ದಿರುವ ಘಟನೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದ್ದು, ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕು ಪಂಚಾಯಿತಿ ವಸತಿ ಗೃಹದಲ್ಲಿ ಸಾಕಷ್ಟು ವರ್ಷದಿಂದ ಕಬಿನಿ ಜಲಾಶಯ ಕಾರ್ಯಪಾಲಕ ಇಂಜಿನಿಯರ್ ಕಚೇರಿಯ ನೌಕರರಾಗಿರುವ ಮಂಜುನಾಥ್ ಅವರ ಮನೆ ಹಿಂಭಾಗವಿದ್ದ ಹಳೆಯ ಶ್ರೀಗಂಧದ ಮರವನ್ನು ಕಳ್ಳತನ ಮಾಡಲಾಗಿದೆ. ಆದರೆ ಕೂಗಳತೆ ದೂರದಲ್ಲಿ ಎಚ್.ಡಿ.ಕೋಟೆ ಪೊಲೀಸ್ ಠಾಣೆ ಇದ್ದರೂ ಕಳ್ಳರು ಮನೆಯಲ್ಲಿರುವ ಜನರಿಗೂ ಕೇಳಿಸದ ರೀತಿಯಲ್ಲಿ ಮರವನ್ನು ಕಳ್ಳತನ ಮಾಡಿರುವುದ ಜನರಲ್ಲಿ ಭಯ ಹುಟ್ಟಿಸಿದೆ.

ಪಟ್ಟಣದಲ್ಲಿ ವಿವಿಧ ಇಲಾಖೆಗಳ ಕಚೇರಿ ಆವರಣ ಹಾಗೂ ಸರ್ಕಾರಿ ಹಳೆಯ ವಸತಿಗೃಹಗಳ ಬಳಿಯಿದ್ದ ಶ್ರೀಗಂಧದ ಮರಗಳನ್ನು ಆಗಾಗ ಕಳ್ಳರು ಕತ್ತರಿಸಿಕೊಂಡು ಹೋಗುತ್ತಿದ್ದರೂ ಎಚ್.ಡಿ.ಕೋಟೆ ಸಾಮಾಜಿಕ ವಲಯಾರಣ್ಯದ ಅಧಿಕಾರಿಗಳು ಮಾತ್ರ ಇದುವರೆಗೆ ಯಾವ ಶ್ರೀಗಂಧದ ಮರ ಕಳ್ಳತನ ಮಾಡಿದ ಒಂದು ಪ್ರಕರಣವನ್ನು ಭೇದಿಸಿ ಶ್ರೀಗಂಧ ಕಳ್ಳರಿಗೆ ಹೆಡೆಮುರಿ ಕಟ್ಟಿಲ್ಲ, ಹೀಗಾಗಿ ಪಟ್ಟಣಿಗರು ಸಾಮಾಜಿಕ ವಲಯಾರಣ್ಯದ ಅರಣ್ಯಾಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಒಂದು ಶ್ರೀಗಂಧ ಮರ ಕಳ್ಳತನವಾಗಿ ಆ ಘಟನೆ ಮಾಸುವ ಮುನ್ನವೇ ಪಟ್ಟಣದಲ್ಲಿ ಪದೇ ಪದೇ ಶ್ರೀಗಂಧದ ಮರ ಕಳ್ಳತನ ಆಗುತ್ತಿರುವುದಕ್ಕೆ ಇಲ್ಲಿನ ಸಾಮಾಜಿಕ ವಲಯದ ಅರಣ್ಯ ಅಧಿಕಾರಿಗಳ ಬೇಜಾವಬ್ದಾರಿ, ನಿರ್ಲಕ್ಷ್ಯವೇ ಕಾರಣ ಎಂದು ಬಿಂಬಿತವಾಗುತ್ತಿದೆ.

ಇನ್ನಾದರೂ, ಸಂಬಂಧಪಟ್ಟ ಮೇಲಾಧಿಕಾರಿಗಳು ಶ್ರೀಗಂಧದ ಮರ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ತನಿಖೆ ಕೈಗೊಂಡು ಶ್ರೀಗಂಧ ಕಳ್ಳರನ್ನು ಪತ್ತೆ ಹಚ್ಚಿ ಕಾನೂನಡಿಯಲ್ಲಿ ಕಠಿಣ ಶಿಕ್ಷಗೆ ಗುರಿಪಡಿಸುವುದರ ಜೊತೆಗೆ ಶ್ರೀಗಂಧ ಮರ ಕಳ್ಳತನ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿರುವ ಇಲ್ಲಿನ ಅಧಿಕಾರಿಗಳ ಮೇಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago