News Karnataka Kannada
Monday, April 29 2024
ಮೈಸೂರು

ಮೈಸೂರಿನಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರುಣಿಸಿ-ಜೀವವನ್ನುಳಿಸಿ ಅಭಿಯಾನ

ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರು ನಗರದಲ್ಲಿ ಎರಡು ತಿಂಗಳ ಕಾಲ ಮೂಕ ಸ್ಪಂದನೆ ಎಂಬ 'ನೀರುಣಿಸಿ-ಜೀವವನ್ನುಳಿಸಿ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
Photo Credit : News Kannada

ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರು ನಗರದಲ್ಲಿ ಎರಡು ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಮರಗಳಿಗೆ ಪ್ರಾಣಿ ಪಕ್ಷಿ ಉಳಿಸಿ ಎಂಬ ನಾಮಫಲಕ ಹಾಗೂ ನೀರು ಹಾಗೂ ಆಹಾರದ ಬಟ್ಟಲು ಅಳವಡಿಸುವ ಮೂಲಕ ಮೂಕ ಸ್ಪಂದನೆ ಜಾಗೃತಿ ಅಭಿಯಾನಕ್ಕೆ ಸಾಂಕೇತಿಕ ಚಾಲನೆ ನೀಡಲಾಯಿತು.

ಈ ವೇಳೆ ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಮಾತನಾಡಿ. ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಮನವಿ ಮಾಡಿದರಲ್ಲದೆ, ಆಹಾರಕ್ಕಾಗಿ ಪರಿತಪಿಸುತ್ತವೆ. ಆದ್ದರಿಂದ ಪರಿಸರ ರಕ್ಷತಿ ರಕ್ಷಿತಃ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ 2ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ, ಅಭಿಯೋಜನೆಯನ್ನು ಮೈಸೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ ರೂಪಿಸುತ್ತಿರುವುದು ಅತ್ಯುತ್ತಮವಾದ ಕೆಲಸ ಎಂದು ಹೇಳಿದರು.

ಬೇಸಿಗೆಯ ದಿನ ಇನ್ನೇನು ಆರಂಭಗೊಂಡಿದ್ದು ಪ್ರಾಣಿ ಪಕ್ಷಿಗಳು ತಮ್ಮ ಅಸ್ಥಿತ್ವಕ್ಕಾಗಿ ಹೋರಾಟ ನಡೆಸುವ ಹಾದಿಯಲ್ಲಿರುತ್ತವೆ. ಜನವಸತಿ ಮತ್ತು ಜನಸಂಖ್ಯೆಗನುಗುಣವಾಗಿ ಮೊಬೈಲ್ ಮತ್ತು ಇತರೆ ತರಂಗದಿಂದಾಗಿ ಹಾಗೂ ಅಗತ್ಯ ನಾಗರೀಕ ಸವಲತ್ತುಗಳ ನೆರಳಿನಡಿಯಲ್ಲಿ ಈಗಾಗಲೇ ಸಂತತಿ ಕ್ಷೀಣಿಸುತ್ತಿರುವ ಹಲವಾರು ಪಕ್ಷಿಗಳು ನಶಿಸಿ ಹೋಗುತ್ತಿವೆ.

ಅಳಿದು ಉಳಿದಿವೆಯೇನೋ ಎಂಬಂತಿರುವ ಜನತೆಯ ಮಧ್ಯೆಯೇ ಬದುಕಿ ಬೆರೆತು ಜೀವಿಸುವ ಪ್ರಾಣಿಪಕ್ಷಿ ಸಂಕುಲಕ್ಕಿಂದು ತಿನ್ನಲು ಆಹಾರ ಮತ್ತು ಕುಡಿಯಲು ನೀರಿಗಾಗಿ ಪರಿತಪಿಸುವ ಕಾಲ ಇದಾಗಿದ್ದು ಈ ಭೂಮಂಡಲದಲ್ಲಿ ಸರ್ವಜೀವಿಗಳಿಗೂ ಸಮಬಾಳು ಸ್ವತಂತ್ರತೆಯಿರಬೇಕು ಮಾನವೀಯ ದೃಷ್ಟಿಯಿಂದ ಅವುಗಳ ಬಗ್ಗೆ ಕಾಳಜಿವಹಿಸಬೇಕೆಂದು ಅವರು ಕಳಕಳಿ ವ್ಯಕ್ತಪಡಿಸಿದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ಮಾತನಾಡಿ ನಮ್ಮ ಈ ಅಭಿಯಾನಕ್ಕೆ ಸಾರ್ವಜನಿಕರು ಸಹ ಮೈಸೂರು ನಗರದ ಪ್ರತಿಯೊಂದು ವಾರ್ಡ್‌ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ನೀರಿನ ತೊಟ್ಟಿ ಹಾಗೂ ಮರಗಳಿಗೆ ನೀರಿನ ತಟ್ಟೆ ಹಾಗೂ ಆಹಾರದ ತಟ್ಟೆ ನೆಡಲಾಗುವುದು ಹಾಗೆಯೇ ಸುತ್ತಮುತ್ತ ಇರುವವರಿಗೆ ಪ್ರತಿನಿತ್ಯ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡುವಂತೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು

ಹಿರಿಯ ಸಮಾಜಸೇವಕ ಕೆ ರಘುರಾಮ ವಾಜಪೇಯಿ ಮಾತನಾಡಿ ಎಲ್ಲರೂ ಅವರವರ ಮನೆಗಳ ಮೇಲಿನ ತಾರಸಿಯ ಮೇಲೆ, ಮರಗಳ ಕೆಳಗೆ, ಮನೆಯ ಮುಂದಿನ ರಸ್ತೆಯ ಇಕೆಲಗಳಲ್ಲಿ ಪ್ರಾಣಿ ಪಕ್ಷಿಗಳ ಬಾಯಿಗೆ ಎಟುಕುವಂತೆ ಮಣ್ಣಿನ ಬಟ್ಟಲು ಅಥವಾ ಸಣ್ಣ ಸಿಮೆಂಟ್ ತೊಟ್ಟಿಗಳನ್ನಿಟ್ಟು ಅದರಲ್ಲಿ ಶುದ್ಧ ನೀರನ್ನು ತುಂಬಿಡಬೇಕು. ಆಹಾರ ಧಾನ್ಯ ಮಿತವಾಗಿಟ್ಟು ಅವುಗಳನ್ನು ಸಲಹ ಬೇಕಿದೆ. ಅದನ್ನು ನಾಗರಿಕ ಸಮಾಜದಲ್ಲಿರುವ ನಮ್ಮಗಳ ಆದ್ಯ ಕರ್ತವ್ಯವೆಂದು ಭಾವಿಸಬೇಕು. ನಮ್ಮೊಟ್ಟಿಗಿರುವ ಜೀವರಾಶಿಗಳನ್ನೂ ರಕ್ಷಿಸಿ ಅವುಗಳ ಬಗೆಗೆ ಅನುಕಂಪ ತೋರಬೇಕಾದ್ದು ಪ್ರತಿಯೊಬ್ಬ ನಾಗರಿಕರ ಕರ್ತವಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭ ನಿಕಟ ಪೂರ್ವ ನಗರಪಾಲಿಕ ಸದಸ್ಯರಾದ ಎಮ್ ವಿ ರಾಮ್ ಪ್ರಸಾದ್, ಅಪೂರ್ವ ಸುರೇಶ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕರಾದ ಜ್ಯೋತಿ ರೇಚಣ್ಣ, ಕಡಕೋಳ ಜಗದೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯಿತಿ ಮೈಸೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ್, ರಾಕೇಶ್, ಮಿರ್ಲೆ ಪಣೀಶ್, ಸುಚೇಂದ್ರ, ವಿದ್ಯಾ, ನಾಗಶ್ರೀ, ದಯಾನಂದ, ಮೈಲಾ ವಿಜಯ್ ಕುಮಾರ್, ಹಾಗೂ ಇನ್ನಿತರರು ಇದ್ದರು. ಅಭಿಯಾನಕ್ಕೆ ಕೈ ಜೋಡಿಸುವವರು 9880752727 ನ್ನು ಸಂಪರ್ಕಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು