News Karnataka Kannada
Wednesday, May 01 2024
ಮೈಸೂರು

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿಗೆ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ

ನಂಜನಗೂಡು ತಾಲ್ಲೂಕಿನ ಹುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರಿಗೆ ಜ್ಞಾನ ಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಲಭಿಸಿದೆ
Photo Credit : NewsKarnataka

ಮೈಸೂರು : ನಂಜನಗೂಡು ತಾಲ್ಲೂಕಿನ ಹುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರಿಗೆ ಜ್ಞಾನ ಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಲಭಿಸಿದೆ. ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ, ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವಕನ್ನಡ ಪ್ರಥಮ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕೀಯರನ್ನು ಗುರುತಿಸಿ ಸುಮಾರು 29 ಮಹಿಳಾ ಸಾಧಕೀಯರಿಗೆ ಪ್ರಶಸ್ತಿ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ, ವಿಶ್ವ ಕನ್ನಡ ಪ್ರಥಮ ರಾಜ್ಯಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನ ಮತ್ತು ಪುಸ್ತಕ ಲೋಕಾರ್ಪಣೆ, ಸಾಧಕರಿಗೆ ಸನ್ಮಾನ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರನ್ನು ಗುರುತಿಸಿ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ‌.ಬಿ‌.ಹೆಚ್ ಜಯದೇವ್, ಸಮ್ಮೇಳನದ ಅಧ್ಯಕ್ಷೆ ಕಮಲಾರಾಜೇಶ್, ಗೌರವಾಧ್ಯಕ್ಷ ಆರ್ ಶೈಲಜಾ ಬಾಬು, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಈ ರವೀಶ್ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು