News Karnataka Kannada
Wednesday, May 01 2024
ಮೈಸೂರು

ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ: ಶ್ರೀನಿವಾಸಪ್ರಸಾದ್

ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ ಇವರಿಗೂ ಹೋಲಿಕೆ ಎಲ್ಲಿದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಪ್ರಶ್ನಿಸಿದ್ದಾರೆ.
Photo Credit : By Author

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ ಇವರಿಗೂ ಹೋಲಿಕೆ ಎಲ್ಲಿದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಕಿರುಚುವುದನ್ನು ಕಲಿತಿದ್ದು,. ಸಿದ್ದರಾಮಯ್ಯರಿಗೂ ಜಮೀರ್‌ಗೂ ಏನು ವ್ಯತ್ಯಾಸವಿದೆ. ಇಬ್ಬರು ಸುಮ್ಮನೆ ಕೂಗುತ್ತಾರೆ. ಇವರು ಹೆರಿಗೆ ವಾರ್ಡ್‌ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿ ಬಿಡುತ್ತದೆ. ಆ ರೀತಿಯಲ್ಲಿ ಕೂಗುವುದನ್ನು ಕಲಿತಿದ್ದಾರೆ. ನಿರ್ಮಲಾ ಸೀತರಾಮನ್ ಬಗ್ಗೆ, ರಾಷ್ಟ್ರಪತಿ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಂತಹ ಸಿದ್ದರಾಮಯ್ಯ ಬಗ್ಗೆ ಏನು ಮಾತನಾಡಲಿ. ಗ್ಯಾರಂಟಿಯಿಂದ ಗೆದ್ದು ಅದೇ ಗುಂಗಿನಲ್ಲಿದ್ದಾರೆ. ಮೋದಿ ಸರ್ಕಾರ ಮಾಡಿರುವ ಜನಪರ ಯೋಜನೆಗಳ ಮುಂದೆ ಇದೆಲ್ಲ ನಡೆಯುತ್ತಾ ನೋಡೋಣ ಎಂದು ಕಿಡಿಕಾರಿದರು.

ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ. ವಿಜಯೇಂದ್ರ, ಮೈಸೂರಿಗೆ ಬಂದಾಗ ನಮ್ಮೆಲ್ಲರ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡುತ್ತೇನೆ. ಮುಂದಿನ ತಿಂಗಳು 17ಕ್ಕೆ ಅವರ ರಾಜಕೀಯ ಜೀವನಕ್ಕೆ 50 ವರ್ಷ ತುಂಬಲಿದೆ. ಅವರಿಂದ ಸಲಹೆ-ಸೂಚನೆ ಪಡೆದಿದ್ದೇನೆ. ಚಾಮರಾಜನಗರ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ವಿಚಾರವಾಗಿ ಮಾತನಾಡಿ ಸಲಹೆ ಪಡೆದಿದ್ದೇನೆ. ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಅವರು ಪ್ರತಿನಿಧಿಸುತ್ತಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸುವ ಕೆಲಸವನ್ನು ಪಕ್ಷದ ವರಿಷ್ಠರು ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು