ಮೈಸೂರು

ಡಿಕೆಶಿ ಎದೆಗೆ ಸಿದ್ದರಾಮಯ್ಯ ಗುಂಡು ಹೊಡೆಯುತ್ತಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು  ಹೊಡೆಯುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರನ್ನು ನೋಡಿದರೆ ಅಯ್ಯೋ ಪಾಪ  ಅನ್ನಿಸುತ್ತೆ. ಎಸ್.ಎಂ.ಕೃಷ್ಣ ಅವರ ಬಳಿಕ ಮತ್ತೊಮ್ಮೆ ಸಿಎಂ ಆಗುವ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಹಳೇ ಮೈಸೂರು ಭಾಗದಲ್ಲಿ ಪ್ರಚಾರ ಮಾಡಿದ್ದರು. ಒಕ್ಕಲಿಗರ ಮನೆ ಮನೆಗೆ ಹೋಗಿ ವೋಟು ಕೇಳಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಚುನಾವಣೆ ನಾಯಕತ್ವ ವಹಿಸಿದ್ದರು. ಮಾತ್ರವಲ್ಲ, ಚುನಾವಣೆಗೆ ಬಂಡವಾಳವನ್ನೂ ಹಾಕಿದ್ದರು. ಈ ಕಾರಣಕ್ಕಾಗಿಯೇ ಎರಡೂವರೆ ವರ್ಷದ ಬಳಿಕ ಸಿಎಂ ಆಗುವ ಭರವಸೆ ಸಿಕ್ಕಿತ್ತು. ಆದರೆ, ಸಿದ್ದರಾಮಯ್ಯ ಸಿಎಂ ಚೇರ್‌ಗೆ ಬಂದು ಕುಳಿತ ಮೇಲೆ ವರಸೆ ಬದಲಾಗಿದೆ ಎಂದರು.

ಮೊದಲು ಎಂ.ಬಿ.ಪಾಟೀಲ್ ಬಾಯಿಂದ ಐದು ವರ್ಷ ನಾನೇ ಸಿಎಂ ಎಂದು ಹೇಳಿಸಿದ್ದರು. ನಂತರ ಸತೀಶ್ ಜಾರಕಿಹೊಳಿ,  ಜಮೀರ್ ಅಹ್ಮದ್, ಕೆ.ಎನ್.ರಾಜಣ್ಣ ಅವರಿಂದ ಹೇಳಿಕೆ ಕೊಡಿಸಿದ್ದಾರೆ. ಬಳಿಕ ಸ್ವತಃ ಸಿದ್ದರಾಮಯ್ಯ ಅವರೇ ನಾನೇ ಐದು ವರ್ಷ ಸಿಎಂ ಎಂದು ಹೇಳಿದ್ದರು. ಇದೀಗ ಮಗನ ಮೂಲಕ ಹೇಳಿಸುತ್ತಿದ್ದಾರೆ. ನಮ್ಮ ಸಮುದಾಯದವರು, ಮುಸಲ್ಮಾನರು ಸಹಕಾರ ನೀಡಿದ್ದರಿಂದ ಸರ್ಕಾರ ಬಂತು ಎನ್ನುತ್ತಾರೆ. ಆ ಮೂಲಕ ನಮಗೆ ಸ್ವಜಾತಿಯವರು, ಮುಸಲ್ಮಾನರು ಮಾತ್ರ ಮುಖ್ಯ ಎನ್ನುವ ಸಂದೇಶ ರವಾನಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಒಕ್ಕಲಿಗರು, ವರುಣದಲ್ಲಿ ಲಿಂಗಾಯತರು ಮತ ನೀಡದೆ ಕಾಂಗ್ರೆಸ್ ಸರ್ಕಾರ ಬಂತಾ? ೩೯ ಲಿಂಗಾಯತರು, ಹತ್ತಾರು ಒಕ್ಕಲಿಗರು ಶಾಸಕರಾಗಿದ್ದಾರೆ. ಖರ್ಗೆ ಕಾರಣಕ್ಕೆ ದಲಿತರೂ ಮತ ಹಾಕಿದ್ದಾರೆ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಎಲ್ಲ ಜಾತಿ, ಜನಾಂಗದವರೂ ನಿಮಗೆ ದೋಖಾ ಆಗಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

ಕೋಲಾರದಲ್ಲಿ ರಾಮನ ಫ್ಲೆಕ್ಸ್ ಹರಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೆ ರಾಮನಿಗೆ ಮನ್ನಣೆ  ಇಲ್ಲ ಎನ್ನುವುದು ಸಾಬೀತಾಗಿದೆ. ರಾಮಸೇತು ಪ್ರಕರಣದಲ್ಲಿ ಕಾಂಗ್ರೆಸ್ ಅಪಿಡವಿಟ್ ಸಲ್ಲಿಸಿತ್ತು. ಕಪಿಲ್ ಸಿಬಲ್ ಮೂಲಕ ರಾಮ ಕಾಲ್ಪನಿಕ ವ್ಯಕ್ತಿ ಎಂದು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿತ್ತು. ಕರ್ನಾಟಕದಲ್ಲೂ ರಾಮನ ಆಶಯಕ್ಕೆ ಅನುಗುಣವಾದ ಸರ್ಕಾರ ಇಲ್ಲ. ಅದರಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಟೀಕಿಸಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago