News Karnataka Kannada
Friday, April 12 2024
Cricket
ಮೈಸೂರು

ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಮೈಸೂರಲ್ಲಿ ಗುಬ್ಬಚ್ಚಿ ಹಬ್ಬ

ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಗುಬ್ಬಚ್ಚಿ ಹಬ್ಬವನ್ನು ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗುಬ್ಬಚ್ಚಿ ಶಾಲೆ) ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
Photo Credit : By Author

ಮೈಸೂರು: ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಗುಬ್ಬಚ್ಚಿ ಹಬ್ಬವನ್ನು ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗುಬ್ಬಚ್ಚಿ ಶಾಲೆ) ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪಕ್ಷಿಗಳಿಗೆ ಪೋಷಣೆಯ ಕಾಳಜಿಯೊಂದಿಗೆ  ಪ್ರತಿ ಮಕ್ಕಳು ತಮ್ಮ ಮನೆಯಲ್ಲಿ ನೀರಿನ ಬಟ್ಟಲು ಇಡುವಂತೆ  ವಿತರಿಸಿದ್ದಲ್ಲದೆ, ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ಅದಕ್ಕೆ ನೀರನ್ನು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಪಕ್ಷಿ ತಜ್ಞರು ಹಾಗೂ ಪರಿಸರವಾದಿ ಸಪ್ತ ಗಿರೀಶ್ ಅವರು,  ಅಳಿವಿನಂಚಿನಲ್ಲಿರುವ ಗುಬ್ಬಿ ಸಂತತಿಯನ್ನು ಮುಂದಿನ ಪೀಳಿಗೆಗೂ ಉಳಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ  ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಎಂದು ಸಲಹೆ ನೀಡಿದರು.

ಕೃಷಿಗೆ ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾವನಪ್ಪುತ್ತಿವೆ.  ಗುಬ್ಬಚ್ಚಿ ಉಳಿಸಿದರೆ ಪರಿಸರದ ಉಳಿವು. ಮನುಷ್ಯರು ನಾವು ಮಾತ್ರ ಬದುಕದೆ, ಎಲ್ಲಾ ಜೀವಿಗಳು ಬದುಕಲು ಅವಕಾಶ ಮಾಡಿಕೊಡಬೇಕಾಗಿದೆ. ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ. ಆದರೆ ಗುಬ್ಬಿ ಸಂತತಿ ಇಂದು ಅಳಿವಿನಂಚಿನಲ್ಲಿದೆ. ಮನುಷ್ಯನಿಂದ ಗುಬ್ಬಿಗೆ ಕಂಟಕ ಎದುರಾಗಿದೆ. ವಾಸಿಸಲು ಪೂರಕ ವಾತಾವರಣ ಇಲ್ಲದಿರುವುದು ಗುಬ್ಬಿ ಸಂತತಿ ಇಳಿಮುಖವಾಗಲು ಪ್ರಮುಖ ಕಾರಣ. ಗುಬ್ಬಿಯ ಸಂಕುಲವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಾತನಾಡಿ,  ಗುಬ್ಬಿ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಡಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಆದರೆ ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ. ಆದ್ದರಿಂದ ವಿಶೇಷವಾಗಿ ಮಕ್ಕಳಿಗೆ ಜಾಗೃತಿ ಮೂಡಿಸಲು ವಿವಿಧ ಪಕ್ಷಿಗಳ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ  ಪ್ರಕೃತಿ ಸಮತೋಲನಕ್ಕಾಗಿ ಗುಬ್ಬಚ್ಚಿಗಳನ್ನು ಉಳಿಸೋಣ, ಬೇಸಿಗೆಯ ಬಿಸಿಲಿನ ತಾಪದಿಂದ ಪ್ರಾಣಿ ಪಕ್ಷಿಗಳನ್ನು ರಕ್ಷಿಸೋಣ. ಅಳಿದು ಹೋಗುತ್ತಿರುವ ಗುಬ್ಬಚ್ಚಿ ಸಂಕುಲಗಳ ಉಳಿವಿಗಾಗಿ ಜನಜಾಗೃತಿ ಮೂಡಿಸೋಣ ನಶಿಸಿ ಹೋಗುತ್ತಿರುವ ಗುಬ್ಬಚ್ಚಿ ಸಂಕುಲವನ್ನು ಸಂರಕ್ಷಿಸೋಣ ಎಂಬ ಘೋಷವಾಕ್ಯ ನಾಮಫಲಕದ ಮೂಲಕ ಪಕ್ಷಿಗಳ ಸಂರಕ್ಷಣೆಯ ಸಂದೇಶ ಸಾರಿದರು.

ಕಾರ್ಯಕ್ರಮದಲ್ಲಿ  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಆರ್ ಎಚ್ ಪವಿತ್ರ, ಪರಿಸರ ಪ್ರೇಮಿ ಶ್ರೀನಿವಾಸ್ ಭಾಷ್ಯಂ ಸೇರಿದಂತೆ ಹಲವರು ಭಾಗವಹಿಸಿದ್ದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್ ಸರ್ಕಾರಿ  ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್, ಅಜಯ್ ಶಾಸ್ತ್ರಿ, ಬೈರತಿಯ ಲಿಂಗರಾಜು, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ದಿವ್ಯ ಹಾಗೂ ಇನ್ನಿತರರು ಭಾಗವಹಿಸಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು