News Karnataka Kannada
Monday, April 22 2024
Cricket
ಮೈಸೂರು

ಯತೀಂದ್ರ ಸಿದ್ದರಾಮಯ್ಯನವರಿಗೆ ಉನ್ನತ ಸ್ಥಾನ ದೊರಕಲೆಂದು ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ

Special pujas to Lord Srikanteshwara for Yathindra Siddharamaiah's elevation
Photo Credit : News Kannada

ನಂಜನಗೂಡು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪುತ್ರ ವರುಣ ಕ್ಷೇತ್ರದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ರಾಮಯ್ಯನವರಿಗೆ ಉನ್ನತ ಸ್ಥಾನ ದೊರಕಲಿ ಎಂದು ವರುಣ ಕ್ಷೇತ್ರದ ತಗಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಂಜನಗೂಡು ದಕ್ಷಿಣ ಕಾಶಿ ಎಂದೆ ಪ್ರಸಿದ್ಧಿಯಾಗಿರುವ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.

ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ರವರ ನೇತೃತ್ವದಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ನಂಜನಗೂಡಿನ ದಕ್ಷಿಣ ಕಾಶಿ ಎಂದೆ ಪ್ರಸಿದ್ಧಿ ಪಡೆದಿರುವ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದಲ್ಲಿ ಕಾಂಗ್ರೆಸ್ ಮುಖಂಡರು ವಿಶೇಷ ಪೂಜಿಸಲಿಸಿ ಸಿಎಂ ಪುತ್ರ ಡಾ. ಯತಿಂದ್ರ ಸಿದ್ರಾಮಯ್ಯನವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಉನ್ನತ ಸ್ಥಾನ ದೊರಕುವಂತಾಗಲಿ ಎಂದು ದೇವರಲ್ಲಿ ವಿಶೇಷ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಲಾಗಿದೆ ,

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಯ ಸದಸ್ಯ ಲಕ್ಷ್ಮಿ ಬಿ ಪಿ ಮಹದೇವ ಎಪಿಎಂಸಿ ಮಾಜಿ ಉಪಾಧ್ಯಕ್ಷ ಆರ್ ಮಹದೇವು ದೇವಾಲಯದ ವ್ಯವಸ್ಥಾಪಕ ಸಮಿತಿಯ ಮಾಜಿ ಅಧ್ಯಕ್ಷ ಪುಟ್ಟ ಮಾದು ಶೆಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಭಿಷೇಕ್ ದಲಿತ ಮುಖಂಡ ಚಿನ್ನಂಬಳ್ಳಿ ಜಿ ಆರ್ ಮಹಾದೇವ್ ದಕ್ಷಿಣ ಮೂರ್ತಿ ಪ್ರಭುಸ್ವಾಮಿ ಮಲ್ಲಿಪುರ ಪ್ರಕಾಶ್ ಗೋನಳ್ಳಿ ನಾರಾಯಣ ಅಳಗಂಚಿ ಚಿನ್ನಸ್ವಾಮಿ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು