News Karnataka Kannada
Sunday, April 21 2024
Cricket
ಮೈಸೂರು

ಮಾ.17ರ ನಂತರ ರಾಜಕೀಯ ನಿವೃತ್ತಿ ಪಡೆಯುವೆ: ಶ್ರೀನಿವಾಸ್ ಪ್ರಸಾದ್

ಮುಂದಿನ ಮಾರ್ಚ್ ತಿಂಗಳ 17ರ ನಂತರ ಚುನಾವಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದು, ಈ ಸಂಬಂಧ ಚಾಮರಾಜನಗರ ಕ್ಷೇತ್ರದ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ವಿಜಯೇಂದ್ರರಿಗೆ ಹೇಳಿದ್ದಾಗಿ ತಿಳಿಸಿದ್ದಾರೆ.
Photo Credit : By Author

ಮೈಸೂರು: ಮುಂದಿನ ಮಾರ್ಚ್ ತಿಂಗಳ 17ರ ನಂತರ ಚುನಾವಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದು, ಈ ಸಂಬಂಧ ಚಾಮರಾಜನಗರ ಕ್ಷೇತ್ರದ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ವಿಜಯೇಂದ್ರರಿಗೆ ಹೇಳಿದ್ದಾಗಿ ತಿಳಿಸಿದ್ದಾರೆ.

ತಮ್ಮ ನಿವಾಸಕ್ಕೆ ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಕೆಲ ಕಾಲ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನನ್ನ ಅಳಿಯ ಡಾ.ಮೋಹನ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು. ಈಗ ಹರ್ಷವರ್ಧನ್ ಕೂಡ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಅವರಿಬ್ಬರೂ ತುಂಬಾ ಅನ್ಯೋನ್ಯವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ ಎಂದರು.

ನಾನು ಮೊದಲೇ ಹೇಳಿರುವಂತೆ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಕುಟುಂಬ ಸದಸ್ಯರು ಸ್ಪರ್ಧಿಸಿದರೂ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಬಿಜೆಪಿಗೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಕಳೆದೈದು ವರ್ಷದಿಂದ ಸಂಸತ್‌ನಲ್ಲಿ ಪ್ರಶ್ನೆ ಕೇಳಿಲ್ಲ ಎಂಬುದನ್ನು ದೊಡ್ಡದು ಮಾಡುತ್ತಿದ್ದಾರೆ. ಆದರೆ, ಅದಕ್ಕೂ ಮೊದಲು ನಾನು ಕೇಳಿರುವ ಪ್ರಶ್ನೆಗಳು, ತಂದಿರುವ ಅನುದಾನದ ಬಗ್ಗೆ ನನ್ನ ಆತ್ಮಚರಿತ್ರೆಯಲ್ಲಿ ತಿಳಿಸುತ್ತೇನೆ. ಸಂಸದರ ನಿಧಿ ತರುವುದನ್ನು ಹುಟ್ಟು ಹಾಕಿದ್ದೇ ನಾನು. ಶಾಸಕನಾಗಿ, ಸಂಸದನಾಗಿ, ಕೇಂದ್ರದಲ್ಲಿ, ರಾಜ್ಯದಲ್ಲಿ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನನ್ನ ಐವತ್ತು ವರ್ಷಗಳ ರಾಜಕೀಯ ಜೀವನದ ಕುರಿತು ನೆನಪುಗಳು ಎಂಬ ಪುಸ್ತಕ ರೂಪದಲ್ಲಿ ಹೊರ ತರುತ್ತಿದ್ದು, ಅದರಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದರು.

ರಾಜ್ಯ ಕಾಂಗ್ರೆಸ್‌ನಿಂದ ದಿಲ್ಲಿಯಲ್ಲಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ನಮ್ಮ ಹಕ್ಕು, ನಮ್ಮ ತೆರಿಗೆ ಎಂದು ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ದಾರೆ. ನಮ್ಮ ತೆರಿಗೆಯನ್ನು ಕೇಳುವ ರೀತಿಯಲ್ಲಿ ಕೇಳಿದರೆ, ನಮ್ಮ ತೆರಿಗೆ ವಾಪಸ್ ಬರುತ್ತದೆ. ಯಾವ ಸರ್ಕಾರವೂ ನಮಗೆ ಅನ್ಯಾಯ ಮಾಡುವುದಿಲ್ಲ. ನಾನು ಹಿಂದೆ ಕಂದಾಯ ಸಚಿವನಾಗಿದ್ದಾಗ ಹೋಗಿ ಕೇಳಿದ್ದಕ್ಕೆ, ನಮ್ಮ ಹಣ ನಮಗೆ ಬಂದಿತ್ತು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು