Categories: ಮೈಸೂರು

ತಿ.ನರಸೀಪುರ: ಕಾಮಗಾರಿ ಅಪೂರ್ಣ, ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ

ತಿ.ನರಸೀಪುರ: ಬಿಲಗೆರೆಹುಂಡಿ ಮತ್ತು ಕೂಡ್ಲೂರು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಾಗಾರಿಯನ್ನು ಅಪೂರ್ಣ ಮಾಡಿರುವ ಗುತ್ತಿಗೆದಾರ ಸಿದ್ದಪ್ಪನಿಗೆ ಬಿಲ್ ತಡೆಹಿಡಿದು, ಇವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವರುಣಾ ವಿಧಾನ ಕ್ಷೇತ್ರ ವ್ಯಾಪ್ತಿಯ ಬಿಲಗೆರೆಹುಂಡಿ ಗ್ರಾಮದಲ್ಲಿ ಜನ ಸಂಪರ್ಕ ಸಭೆ ನಡೆಸುತಿದ್ದ ವೇಳೆ ಗ್ರಾಮಸ್ಥರು ಜಲ ಜೀವನ್ ಮಿಷನ್ ಯೋಜನೆಯ ಅಸಮರ್ಪಕ ಕಾಮಗಾರಿ ಬಗ್ಗೆ ಗಮನಕ್ಕೆ ತಂದ ಹಿನ್ನಲೆಯಲ್ಲಿ ಶಾಸಕರು ಸಂಬಂಧಿಸಿದ ಉನ್ನತ ಅಧಿಕಾರಿಗಳಿಗೆ ಸ್ಥಳದಲ್ಲೇ ದೂರವಾಣಿ ಕರೆ ಮಾಡಿ ಗುತ್ತಿಗೆದಾರ ಸಿದ್ದಪ್ಪ ಜೆಜೆಎಂ ಯೋಜನೆಯ ಕಾಮಗಾರಿ ಪೂರ್ಣಮಾಡುವವರೆಗೆ ಯಾವುದೇ ಬಿಲ್ ನೀಡಬಾರದು ಒಂದು ವೇಳೆ ಕಾಮಗಾರಿ ವಿಚಾರದಲ್ಲಿ ಅಸಡ್ಡೆ ತೋರಿದರೆ ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಮ್ಮ ಕಾಂಗ್ರೆಸ್ ಸರ್ಕಾರ ವಿದ್ದಾಗ ನಮ್ಮ ತಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆವೇಳೆ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುಧಾನ ನೀಡಿ ಕ್ಷೇತ್ರದ ಅಭಿವೃದ್ಧಿ ಮಾಡಲಾಯಿತು. ಈಗ ಬಿಜೆಪಿ ಸರ್ಕಾರ ಕೋವಿಡ್ ನೆಪ ಹೇಳಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಇರುವಷ್ಟು ಅನುದಾನದಲ್ಲೇ ಅಭಿವೃದ್ಧಿ ಕಾರ್ಯಮಾಡುತಿದ್ದೇನೆ ಎಂದರು. ಪ್ರತಿ ಗ್ರಾಮಕ್ಕೊ ಭೇಟಿ ಕೊಟ್ಟ ಸಂದರ್ಭದಲ್ಲಿ ಸಾರಿಗೆ ವ್ಯವಸ್ಥೆ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಸಾರಿಗೆ ವ್ಯವಸ್ಥೆ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಜ್ಯೋತಿ ಕಾಂತರಾಜು,ಉಪಾಧ್ಯಕ್ಷ ನಾಗರಾಜು, ಸದಸ್ಯರಾದ ಚಂದ್ರಮ್ಮ , ಮಹದೇವ ಸ್ವಾಮಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನಹುಂಡಿ ಮಹೇಶ್, ತಾಲ್ಲೂಕು ಪಂಚಾಯಿತಿ ಇಓ ಕೃಷ್ಣ, ಪಿ.ಡಿ.ಓ ಧರಣಿಶ್, ಗುತ್ತಿಗೆದಾರ ಮಂಟೇಲಿಂಗಪ್ಪ, ಬಸವರಾಜು, ವಕೀಲ ಶಿವಪ್ರಕಾಶ್, ನಂಜುಂಡೇಗೌಡ, ಅರುಣ್, ದೇವರಾಜಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು .

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

1 hour ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago