Categories: ಮೈಸೂರು

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಮೈಸೂರು: ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ ಬಿರುಗಾಳಿ ಮತ್ತು ಆಲಿಕಲ್ಲಿನ ಹೊಡೆತಕ್ಕೆ ಜನ ಕಂಗಾಲಾಗುವಂತೆ ಮಾಡಿತ್ತಲ್ಲದೆ, ಹಲವು ಅನಾಹುತಗಳನ್ನು ಸೃಷ್ಟಿಸಿತು.

ನಗರದಲ್ಲಿ ಬಿಸಿಲಿನ ತಾಪ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದರಿಂದ ಮಳೆ ಯಾವಾಗ ಬರುತ್ತೋ ಎಂದು ಜನ ಮುಗಿಲು ನೋಡುತ್ತಿದ್ದರು. ಆದರೆ ಶುಕ್ರವಾರ ಸಂಜೆ ವೇಳೆಗೆ ಶುರುವಾರ ಮಳೆ ಇಡೀ ನಗರವನ್ನು ತಂಪಾಗಿಸಿದ್ದಲ್ಲದೆ ಅನಾಹುತಕ್ಕೂ ಹಾದಿ ಮಾಡಿತು. ಮಳೆಯಿಂದ ಜನಜೀವನ ಕೊಂಚ ಪ್ರಮಾಣದಲ್ಲಿ ಅಸ್ತವ್ಯಸ್ತಗೊಂಡಿತು. ಜನರು ಒಂದೆಡೆಯಿಂದ ಮತ್ತೊಂದೆಡೆ ತೆರಳಲು ಪರದಾಡುವ ಸ್ಥಿತಿ ಕಂಡುಬಂತು. ಸಾಕಷ್ಟು ಜನರು ಅಂಗಡಿ -ಮುಂಗಟ್ಟುಗಳಲ್ಲಿ ಆಶ್ರಯ ಪಡೆದು, ಮಳೆ ನಿಂತ ನಂತರ ತೆರಳಿದರು. ನಗರದ ತಗ್ಗು ಪ್ರದೇಶ ಹಾಗೂ ಕೆಲ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದು ಜನರು, ವಾಹನ ಸವಾರರು ಸಮಸ್ಯೆ ಎದುರಿಸಿದರು.

ವಿದ್ಯಾರಣ್ಯಪುರಂ, ಕುವೆಂಪುನಗರ, ಜೆ.ಪಿ.ನಗರ, ಅಗ್ರಹಾರ, ಶಾರದಾದೇವಿನಗರ, ಬೋಗಾದಿ, ಕನಕದಾಸನಗರ, ಜನತಾನಗರ ಸೇರಿದಂತೆ ಹಲವೆಡೆ ಹೆಚ್ಚಾಗಿ ಮಳೆಯಾದ ಹಿನ್ನೆಲೆಯಲ್ಲಿ ರಸ್ತೆ, ಮೋರಿ, ಒಳಚರಂಡಿಗಳಲ್ಲಿ ನೀರು ಉಕ್ಕಿ ಹರಿಯಿತು. ನಗರದ ಹೃದಯಭಾಗ ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ಸಯ್ಯಜಿರಾವ್ ರಸ್ತೆ, ಶಿವರಾಂಪೇಟೆ, ದೇವರಾಜ ಅರಸು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಭರ್ತಿಯಾಗಿದ್ದ ಕಾರಣ ಸಂಚರಿಸಲು ವಾಹನ ಸವಾರರು ಹರಸಾಹಸಪಟ್ಟರು.

ನಗರದ ಹಲವೆಡೆ ೧೫೦ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಮುರಿದು ಬಿದ್ದು, ಅವಾಂತರ ಸೃಷ್ಟಿಯಾಯಿತು. ರಸ್ತೆಯಲ್ಲಿ ನಿಲ್ಲಿಸಿದ್ದ ಅನೇಕ ಕಾರುಗಳು ಹಾಗೂ ಬೈಕ್‌ಗಳ ಮೇಲೆ ಮರ ಬಿದ್ದ ಕಾರಣ ವಾಹನಗಳು ಜಖಂಗೊಂಡಿವೆ. ಬಹುತೇಕ ಕಡೆ ನೆಲಕ್ಕುರುಳಿ ಸಂಚಾರಕ್ಕೆ ಅಡ್ಡಿಯಾಗಿದ್ದ ಮರಗಳ ಕೊಂಬೆಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಬಹುತೇಕ ಕಡೆ ವಿದ್ಯುತ್ ತಂತಿಗಳ ಮೇಲೆ ಮರಗಳ ಕೊಂಬೆ ಉರುಳಿದ ಪರಿಣಾಮ ಕೆಲಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ನಗರದ ಧನ್ವಂತರಿ ರಸ್ತೆಯಲ್ಲಿ ಬೃಹತ್ ಮರ ಧರೆಗುರುಳಿದ ಪರಿಣಾಮ ಎರಡು ಆಟೋ ಸಂಪೂರ್ಣ ಜಖಂಗೊಂಡವು. ಮಾನಂದವಾಡಿ ರಸ್ತೆಯ ಸಿಲ್ಕ್ ಫ್ಯಾಕ್ಟರಿ ಬಳಿ ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬ ಹಾಗೂ ಎರಡು ಮರ ಧರೆಗುರುಳಿದವು. ಪರಿಣಾಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ಶಾಲಾ ವಾಹನ, ಆಟೋ, ಕಾರುಗಳು, ಸರ್ಕಾರಿ ಬಸ್, ಬೈಕ್‌ಗಳು ಜಖಂಗೊಂಡವು. ರಾಮಸ್ವಾಮಿ ವೃತ್ತದಿಂದ ನ್ಯಾಯಾಲಯದ ಕಡೆಗೆ ಹೋಗುವ ಮಾರ್ಗದಲ್ಲಿ ಮರದ ಕೊಂಬೆ ಧರೆಗುರುಳಿದ್ದು, ಒಂದು ಕಾರು ಜಖಂ ಗೊಂಡಿದೆ. ಅಲ್ಲದೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ನ್ಯಾಯಾಲಯದ ಮುಂಭಾಗ ವಾಣಿವಿಲಾಸ ರಸ್ತೆಯಲ್ಲಿ ಮರದ ಕೊಂಬೆ ಧರೆಗುರುಳಿದ್ದು, ಮೂರು ಬೈಕ್ ಜಖಂಗೊಂಡಿವೆ. ನ್ಯಾಯಾಲಯದ ಮುಂಭಾಗ ಎರಡು ಪಾರ್ಕ್‌ಗಳಲ್ಲಿ 10ಕ್ಕೂ ಹೆಚ್ಚು ಮರದ ಕೊಂಬೆ ಬಿದ್ದಿವೆ.

Ashika S

Recent Posts

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

40 seconds ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

29 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

52 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago