Categories: ಮೈಸೂರು

ಮೈಸೂರಲ್ಲಿ ಮೇಳೈಸಿದ ಸಾಂಸ್ಕೃತಿಕ ವೈಭವ

ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆ ಮುಂಭಾಗ ಆಯೋಜಿಸಿದ್ದ  ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವೈಭವ ಮೇಳೈಸಿತು.

ಅರಮನೆ ಮಂಡಳಿ ವತಿಯಿಂದ 75ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮವನ್ನು ಭಾನುವಾರ ಸಂಜೆ 7ರಿಂದ ಮಧ್ಯರಾತ್ರಿ 12ರ ವರೆಗೆ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ದೇಶ ಭಕ್ತಿ ಗೀತಗಾಯನ, ಸೈನಿಕ ಪರಾಕ್ರಮದ ನೃತ್ಯವೈಭವ, ಲೇಸರ್ ಶೋ  ಚಮತ್ಕಾರ ಸಭಿಕರ ಕಣ್ಮನ ಸೆಳೆಯಿತು.  ಇದರೊಂದಿಗೆ ಒಂದು ದಿನಕ್ಕೂ ಮುನ್ನವೇ ಆಜಾದಿಯ ಸಡಗರ ಕಳೆಗಟ್ಟಿತ್ತು. ಈ ಕ್ಷಣಗಳನ್ನು ಪ್ರವಾಸಿಗರು, ಸಾರ್ವಜನಿಕರು ಕಣ್ತುಂಬಿಕೊಂಡರು.

ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ ಮೂಲಕ ಉದ್ಘಾಟಿಸಿದರು. ಬಳಿಕ ಜಿಲ್ಲಾ  ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರ ಎಸ್.ಎ.ರಾಮದಾಸ್ ಮಾತನಾಡಿದರು. ಮೇಯರ್ ಸುನಂದ ಪಾಲನೇತ್ರ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆಯ ಅಧ್ಯಕ್ಷ ಆರ್.ರಘು, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ, ತಹಸೀಲ್ದಾರ್ ಗಿರೀಶ್,  ಬಿಜೆಪಿ ಮುಖಂಡರಾದ ಎಚ್.ವಿ.ರಾಜೀವ್, ಅಪ್ಪಣ್ಣ ಇನ್ನಿತರರು ಇದ್ದರು.

ಬಳಿಕ ಸಾಂಸ್ಕೃತಿಕ ಕಲೆಗಳು ಮೂಲಕ ದೇಶಭಕ್ತಿಯನ್ನು ಪ್ರಸ್ತುತ ಪಡಿಸಲಾಯಿತು. ಸ್ಥಳೀಯ ಕಲಾವಿದ,  ಆಪ್ತಮಿತ್ರ ಖ್ಯಾತಿಯ ಶ್ರೀಧರ್ ಜೈನ್ ಮತ್ತು ತಂಡದಿಂದ ಸೈನಿಕ ನೃತ್ಯ ರೂಪಕ ಕಾರ್ಯಕ್ರಮ ನಡೆಸಿಕೊಟ್ಟಿತು. ೮೦ ಕಲಾವಿದರು ಯೋಧರ ಸಾಹಸ, ಸವಾಲು, ಜೀವದ ಕಷ್ಟ-ನಷ್ಟವನ್ನು ನೃತ್ಯರೂಪಕ ಮೂಲಕ ಸಭಿಕರ ಎದುರು ತೆರೆದಿಟ್ಟರು.

ಹಿನ್ನೆಲೆ ಗಾಯಕರಾದ ಅಜಯ್ ವಾರಿಯರ್, ಅಂಕಿತ ಕುಂಡು, ಶಶಿಕಲಾ ಸುನೀಲ್, ನಾಗಚಂದ್ರಿಕಾ ಭಟ್, ರವಿ ಮುರೂರು, ಚಿಂತನ ವಿಕಾಸ್ ಮತ್ತು ತಂಡದವರಿಂದ ವಂದೇ ಮಾತರಂ ಸಂಗೀತ ಕಾರ್ಯಕ್ರಮ  ಜರುಗಿತು. ದೇಶಾಭಿಮಾನವನ್ನು ಸಾರುವ ಅನೇಕ ಗೀತೆಗಳನ್ನು ಸೊಗಸಾಗಿ ಹಾಡಿ ನೆರೆದವರನ್ನು ರಂಜಿಸಿದರು. ಮೈ ಲೇಸರ್ ವಿಷನ್ ಸಂಸ್ಥೆಯಿಂದ ಲೇಸರ್ ಷೋ ನಡೆಯಿತು. ಸ್ವಾತಂತ್ರೃ ಸಂಗ್ರಾಮದ ಚರಿತ್ರೆ, ಹೋರಾಟಗಾರರ ತ್ಯಾಗ ಬಲಿದಾನವನ್ನು ನವತಂತ್ರಜ್ಞಾನದ ಮೂಲಕ ವರ್ಣರಂಜಿತವಾಗಿ ತೆರೆದಿಡಲಾಯಿತು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago