Categories: ಮೈಸೂರು

ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಬದ್ಧ

ಮೈಸೂರು: ನಾವು ಯಾವುದೇ ಸುಳ್ಳು ಭರವಸೆಗಳನ್ನು ನೀಡಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಬದ್ಧವಾಗಿದೆ. ಇದಕ್ಕೆ ಯಾರ ಗಡುವೂ ಬೇಕಿಲ್ಲ. ಅವರು ನೀಡಿರುವ ಗಡುವಿಗಿಂತ ಮೊದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದು ಶಾಸಕ ಕೆ.ಹರೀಶ್‌ಗೌಡ ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ನೀಡಿದರು.

ಮಾವಿನ ಮೇಳ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಸಂಸದ ಪ್ರತಾಪಸಿಂಹ ಗ್ಯಾರಂಟಿ ಯೋಜನೆಗಳ ಜಾರಿಗೆ ಜೂ.1ರ ಗಡುವು ನೀಡಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಯಾವುದೇ ಸುಳ್ಳು ಭರವಸೆಗಳನ್ನು ನೀಡಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ಬದ್ಧವಾಗಿದೆ. ಇದಕ್ಕೆ ಯಾರ ಗಡುವೂ ಬೇಕಿಲ್ಲ. ಅವರು ನೀಡಿರುವ ಗಡುವಿಗಿಂತ ಮೊದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದರು.

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನನ್ನೂ ಮಾಡಲಿಲ್ಲ. ಕೇವಲ ಕೋಮು ದ್ವೇಷ ಕೆರಳಿಸುವ ಕೆಲಸ ಮಾಡಿದರು. ಕಾಂಗ್ರೆಸ್ ಅಭಿವೃದ್ಧಿ ಪರವಾಗಿದ್ದು, ಅಭಿವೃದ್ದಿ ಯೋಜನೆಗಳಿಗೆ ರಾಜಕೀಯ ಮಾಡದೆ ಸಹಕಾರ ನೀಡುತ್ತೇವೆ. ಪ್ರತಾಪಸಿಂಹ ಅವರು ಮೊದಲು ಮೋದಿ ಅವರಿಂದ ಎಲ್ಲರ ಖಾತೆಗೂ 15 ಲಕ್ಷ ಹಾಕಿಸಲಿ. ರಾಜ್ಯಕ್ಕೆ ಬರಬೇಕಿರುವ ಅನುದಾನ ತರಲಿ ಎಂದು ತಿರುಗೇಟು ನೀಡಿದರು.

ಮಾಜಿ ಸಚಿವ ಡಾ.ಅಶ್ವಥ್‌ನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲಿಸಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ಯಾವುದೇ ದ್ವೇಷ ರಾಜಕಾರಣ ಮಾಡುತ್ತಿಲ್ಲ. ಪೊಲೀಸರು ಇಷ್ಟು ದಿನ ಮಲಗಿದ್ದರು. ಈಗ ಅವರನ್ನು ಎಬ್ಬಿಸಿದ್ದೇವೆ. ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸಿರಲಿಲ್ಲ. ಈಗ ಕಾನೂನಾತ್ಮಕವಾಗಿ ಪ್ರಕರಣ ದಾಖಲಿಸಿದ್ದೇವೆ ಎಂದ ಅವರು, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಂ.ರುದ್ರೇಶ್, ಹಿರಿಯ ಸಹಾಯಕ ನಿರ್ದೇಶಕ ಶಶಿಧರ್, ಸಹಾಯಕ ನಿರ್ದೇಶಕರಾದ ಅಶ್ವಿನಿ, ಶಬೀನಾ ಸೇರಿದಂತೆ ಹಲವರು ಭಾಗವಹಿಸಿದ್ದರು.

Gayathri SG

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

9 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

34 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

47 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago