News Karnataka Kannada
Monday, May 06 2024
ಮೈಸೂರು

ಮೈಸೂರು: ಬೈಕ್-ಲಾರಿ ಅಪಘಾತದಲ್ಲಿ ಮೂವರು ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಮೈಸೂರು, ಆ.3: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಬಳಿ ಮಂಗಳವಾರ ನಡೆದಿದೆ.

ಮೃತರನ್ನು ಚಿಕ್ಕಲೇಗೋವಡಪುರ ನಿವಾಸಿಗಳಾದ ಸಣ್ಣಸ್ವಾಮಿ, ಪ್ರಭು, ಮಹೇಶ ಎಂದು ಗುರುತಿಸಲಾಗಿದೆ. ಹುಣಸೂರಿನಿಂದ ಎಚ್.ಡಿ.ಕೋಟೆ ಕಡೆಗೆ ಬೈಕಿನಲ್ಲಿ ಮೂವರು ಬರುತ್ತಿದ್ದರು ಎಂದು ಹೇಳಲಾಗುತ್ತಿದೆ.

ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹಗಳನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು