News Karnataka Kannada
Monday, April 29 2024
ಮೈಸೂರು

ಮೈಸೂರಿನಲ್ಲಿ ಕಾರು ಡಿಕ್ಕಿಯಾಗಿ ಹುಲಿ ಸಾವು

New Project 2024 01 30t135256.090
Photo Credit : News Kannada

ಮೈಸೂರು: ಕಾರು ಡಿಕ್ಕಿಯಾಗಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ.

ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಹುಲಿಗೆ ಡಿಕ್ಕಿ ಹೊಡೆದಿದೆ. 18 ತಿಂಗಳ ಹುಲಿ ಸ್ಥಳದಲ್ಲೇ ಮೃತಪಟ್ಟಿದೆ. ಕೆಲ ತಿಂಗಳ ಹಿಂದಷ್ಟೇ ತನ್ನ ತಾಯಿಯೊಂದಿಗೆ ಕಾಣಿಸಿಕೊಂಡಿದ್ದ ನಾಲ್ಕು ಮರಿಗಳಲ್ಲಿ ಈ ಹುಲಿ ಕೂಡ ಒಂದಾಗಿತ್ತು.

ಮೃತ ಹುಲಿಯನ್ನು ಅರಣ್ಯ ಇಲಾಖೆಯು ‘ಟಿ6’ ಎಂದು ಗುರುತಿಸಿದೆ. ಎರಡು ದಿನಗಳ ಹಿಂದಷ್ಟೇ ಸಿಂಧುವಳ್ಳಿ-ಬ್ಯಾಟಳ್ಳಿ ಪ್ರದೇಶದಲ್ಲಿ ಕ್ಯಾಮರಾ ಟ್ರ್ಯಾಪ್ ನಲ್ಲಿ ಪತ್ತೆಯಾಗಿತ್ತು.

ಕಾರು ಡಿಕ್ಕಿಯಾಗಿ ಹುಲಿ ಸಾವು ಪ್ರಕರಣ ಸಂಬಂಧ ಪೊಇಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು