News Karnataka Kannada
Saturday, May 04 2024
ಮೈಸೂರು

ನಾಳೆ ಬಿಳಿಗೆರೆ ಗ್ರಾಮಕ್ಕೆ ಸಿಎಂ ಸಿದ್ದು ಆಗಮನ : ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

ಏ.1 ರಂದು ನಾಳೆ ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮಕ್ಕೆ ಆಗಮಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
Photo Credit : NewsKarnataka

ಮೈಸೂರು : ಏ.1 ರಂದು ನಾಳೆ ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮಕ್ಕೆ ಆಗಮಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಗ್ರಾಮದ ಹೊರವಲಯದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆಯನ್ನು ನಡೆಸಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಅವರು ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಂಜನಗೂಡು, ವರುಣ, ತಿ. ನರಸೀಪುರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ನಡೆಸಲಾಗುತ್ತಿದೆ.

ಹಾಗಾಗಿ ನಾಳೆ ಏ.1 ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಗಮಿಸಲಿದ್ದಾರೆ. ಇವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಕೆ.ವೆಂಕಟೇಶ್, ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಸೇರಿದಂತೆ ಶಾಸಕರು, ಸಚಿವರು ಭಾಗವಹಿಸಿಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು