ನಂಜನಗೂಡು: ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾದ ಪ್ರಕರಣವನ್ನು ಖಂಡಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಹುರಾ ಗ್ರಾಮದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಯುವಕರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಹುರಾ ಗ್ರಾಮದ ಸರ್ಕಲ್ ನಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ದಲಿತ ಸಮುದಾಯದ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಇಂತಹ ಪ್ರಕರಣಗಳು ಮತ್ತೆ ತಾಲ್ಲೂಕಿನಲ್ಲಿ ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.