ಮೈಸೂರು: ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (72) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದು, ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು. ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು.
ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2013ರಿಂದ 2018ರವರೆಗೆ ಶಾಸಕರಾಗಿ ಅಭಿವೃದ್ಧಿ ಕಾರ್ಯಗಳ ಮಾಡಿದ್ದಾರೆ.