Categories: ಮೈಸೂರು

ಚಾಮುಂಡಿಬೆಟ್ಟದ ಪಾದದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಕೆ

ಮೈಸೂರು:  ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಸೈನಿಕ ಅಕಾಡೆಮಿ  ವತಿಯಿಂದ ಶನಿವಾರ ಪ್ರಾಣಿ ಪಕ್ಷಿಗಳು, ಜಾನುವಾರುಗಳಿಗೆ ನೀರು ಕುಡಿಯುಲು ತೊಟ್ಟಿಗಳನ್ನಿಡಲಾಯಿತಲ್ಲದೆ, ದನ, ಕರುಗಳು, ಕೋತಿ ಪ್ರಾಣಿ–ಪಕ್ಷಿಗಳಿಗೆ ನೀರು ಕುಡಿಯಲು ಅನುಕೂಲವಾಗುವಂತೆ ತೊಟ್ಟಿಗಳನ್ನು ಅಳವಡಿಸಲಾಯಿತು.

ಈ ವೇಳೆ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡರವರು  ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರೇ ನರಕಯಾತನೆ ಅನುಭವಿಸುತ್ತಿರುವಾಗ ಮೂಕ ಪ್ರಾಣಿಗಳ ಗತಿಯೇನು ಎಂಬುದನ್ನು ಅರಿತು ಕುಡಿಯುವ ನೀರಿನ ತೊಟ್ಟಿಗಳನ್ನು ಅಳವಡಿಸುತ್ತಿರುವುದು ಶ್ಲಾಘನೀಯ ಎಂದರು.

ಸೈನಿಕ ಅಕಾಡೆಮಿ ಮೈಸೂರಿನ ಸಂಸ್ಥಾಪಕರು ಹಾಗೂ ಮಾಜಿ ಕಮಾಂಡೋ ಶ್ರೀಧರ್ ಮಾತನಾಡಿ,  ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ. ಅವುಗಳು ಆಹಾರಕ್ಕಾಗಿ ನಾಡಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಅಭಿವೃದ್ಧಿಯ ನೆಪದಲ್ಲಿ ಪರಿಸರ ಸಂರಕ್ಷಣೆ ಕಡಿಮೆಯಾಗುತ್ತಿದೆ. ಹವಾಮಾನ ವೈಪರಿತ್ಯಕ್ಕೂ ಪರಿಸರ ಸಂರಕ್ಷಣೆಯ ವೈಫಲ್ಯವೂ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮೈಸೂರು ನಗರ ಜೆಡಿಎಸ್ ಕಾರ್ಯಧ್ಯಕ್ಷರಾದ  ಪ್ರಕಾಶ್ ಪ್ರಿಯದರ್ಶನ್, ಜೆಡಿಎಸ್ ನಗರ ಉಪಾಧ್ಯಕ್ಷರಾದ ಯದು ನಂದನ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಬೈರತಿ ಲಿಂಗರಾಜು,  ಸಮಾಜ ಸೇವಕರಾದ ಸವಿತಾ ಘಾಟ್ಕೆ, ನಾಗಶ್ರೀ ಸುಚಿಂದ್ರ, ಸೈನಿಕರು ಹಾಗೂ ಸೈನಿಕ ಅಕಾಡೆಮಿಯ ತರಬೇತಿ ಪಡೆಯುತ್ತಿರುವ ಮಕ್ಕಳು ಹಾಜರಿದ್ದರು.

Ashika S

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

25 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

41 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago