Categories: ಮೈಸೂರು

ನಂಜನಗೂಡಿನಲ್ಲಿ ಭಾರಿ ಜನಸ್ತೋಮದೊಂದಿಗೆ ಶಾಸಕ ಬಿ. ಹರ್ಷವರ್ಧನ್ ನಾಮಪತ್ರ ಸಲ್ಲಿಕೆ

ಮೈಸೂರು: ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ಬಿ. ಹರ್ಷವರ್ಧನ್ ನಾಮಪತ್ರ ಸಲ್ಲಿಸಿದರು.

ನಂಜನಗೂಡು ಪಟ್ಟಣದ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು- ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ ಕಾಲ್ನಡಿಗೆಯಿಂದ ತಾಲೂಕು ಆಡಳಿತ ಭವನಕ್ಕೆ ಆಗಮಿಸಿ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿಯವರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು.ಅಪಾರ ಜನಸ್ತೋಮದೊಂದಿಗೆ ತಾಲೂಕು ಆಡಳಿತ ಭವನದವರೆಗೆ ಕಾರ್ಯಕರ್ತರೊಂದಿಗೆ ಬೃಹತ್ ಕಾಲ್ನಡಿಗೆಯಲ್ಲಿ ಜಯ ಘೋಷ ಕೂಗಿ ಪಕ್ಷದ ಕಾರ್ಯಕರ್ತರು ಹರುಷ ವ್ಯಕ್ತಪಡಿಸಿದರು.

ಎರಡನೇ ಬಾರಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮ ನಿರ್ದೇಶನ ಮಾಡಿ ಬಳಿಕ ಶಾಸಕ ಹರ್ಷವರ್ಧನ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು, ನಂಜನಗೂಡು ಕ್ಷೇತ್ರದಲ್ಲಿ 823 ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದೇನೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತ ಸಂದರ್ಭದಲ್ಲಿ ಎಂದು ಕಂಡರಿಯದ ಅಭಿವೃದ್ಧಿ ಆಗಿದೆ. ತಾಲೂಕಿನಲ್ಲಿ ನಾನು ಮಾಡಿರುವ ಉತ್ತಮ ಕೆಲಸ ಕಾರ್ಯವೈಖರಿಯನ್ನು ಪರಿಗಣಿಸಿ ಮತ್ತೆ ನನ್ನನ್ನು ಮರು ಆಯ್ಕೆ ಮಾಡಲು ಮತದಾರರು ತೀರ್ಮಾನಿಸಿದ್ದಾರೆ. ಮತ್ತೊಮ್ಮೆ ಕಮಲ ಅರಳಿಸುತ್ತೇನೆ.

ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅನುಕಂಪ ಎಂದಿಗೂ ನಡೆಯುವುದಿಲ್ಲ. ಕ್ಷೇತ್ರದ ಮತದಾರರು ಅಭಿವೃದ್ಧಿಯನ್ನು ಮನಗಂಡು ಅನುಕಂಪದ ಕಡೆ ಯಾವುದೇ ಕಾರಣಕ್ಕೂ ಒಲವು ತೋರುವುದಿಲ್ಲ ಎಂಬ ನಂಬಿಕೆ ಇದೆ. ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಜೊತೆ ಒಪ್ಪಂದ ಮಾಡಿಕೊಂಡು ಅನುಕಂಪದ ಹೆಸರೇಳಿ ಕೈ ಜೊತೆ ಸೇರಿದ್ದಾರೆ. ಇದು ಒಂದು ಪ್ರಾದೇಶಿಕ ಪಕ್ಷಕ್ಕೆ ನಾಚಿಕೆಯ ಸಂಗತಿ ಎಂದು ಕಿಡಿಕಾರಿದರು. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂಬ ನಂಬಿಕೆ ಇದೆ ಎಂದರು.

ಈ ಸಂದರ್ಭದಲ್ಲಿ ಕುಂಬರಹಳ್ಳಿ ಸುಬ್ಬಣ್ಣ ಹೊರಳವಾಡಿ ಮಹೇಶ್, ಬಾಲಚಂದ್ರ, ಚಿಕ್ಕರಂಗನಾಯಕ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Sneha Gowda

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

5 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

22 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

46 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago