ಮೈಸೂರು: ಯದುವೀರ್ ಒಡೆಯರ್’ಗೆ ಟಿಕೆಟ್ ಕೊಡುವುದು ನಿಜವಾದರೆ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಅವರು ಇಂದು(ಮಾ.12) ಸುದ್ದಿಗಾರರೊಂದಿಗೆ ಮಾತನಾಡಿ, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ ಎಂದು ಹೇಳಿದರು.
ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತಾ ಹೊರಟಿದ್ದಾರೆ, ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ತಿಳಿಸಿದ್ದಾರೆ.