News Karnataka Kannada
Tuesday, April 16 2024
Cricket
ಮೈಸೂರು

ಕೈಕೊಟ್ಟ ಪ್ರಿಯಕರ: ಇಲಿ ಪಾಷಾಣ ತಿಂದು ಯುವತಿ ಸಾವು

Young woman dies after consuming rat poison
Photo Credit : News Kannada

ಮೈಸೂರು: ಪ್ರೀತಿಸಿದ ಹುಡುಗ ಮತ್ತೊಬ್ಬಳ ಹಿಂದೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಸರ್ಗ(20) ಎಂದು ಗುರುತಿಸಲಾಗಿದೆ. ಈಕೆ ಇಲಿ ಪಾಷಾಣ ತಿಂದು ಆಸ್ಪತ್ರೆ ಸೇರಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ನಿಸರ್ಗಾ ಕೆ.ಆರ್ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದಳು. ನಿಸರ್ಗಾಳಿಗೆ ಸುಹಾಸ್ ರೆಡ್ಡಿ ಎಂಬ ಯುವಕನ ಪರಿಚಯಚಾಗುತ್ತದೆ. ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಗೆ ತಿರುಗುತ್ತಿದೆ. ಆದರೆ ಇತ್ತೀಚಿಗೆ ಸುಹಾಸ್ ಮತ್ತೊಬ್ಬ ಯುವತಿಯೊಂದಿಗೆ ಸ್ನೇಹ ಬೆಳಸಿದ್ದನು. ಇದರಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ನಿಸರ್ಗಾ ಕೈ ಕೊಯ್ದುಕೊಂಡು ಜಾಲಾತಾಣದಲ್ಲಿ ಫೋಟೊ ಹಾಕಿದ್ದಳು. ಹಾಗೆ ಈ ವಿಚಾರವನ್ನು ನಿಸರ್ಗಾ, ಪ್ರಿಯತಮ ಸುಹಾಸ್​ಗೆ ಇತ್ತೀಚಿಗೆ ಪರಿಚಯವಾಗಿದ್ದ ಮೊತ್ತೊಬ್ಬ ಯುವತಿಯ ಪೋಷಕರಿಗೂ ತಿಳಿಸಿದ್ದಾಳೆ. ಆಗ ಪೋಷಕರು ಕೆಟ್ಟದಾಗಿ ನಿಂದಿಸಿ ಸಾಯುವಂತೆ ಪ್ರೇರೇಪಿಸಿರುವ ಆರೋಪ ಕೇಳಿಬಂದಿದೆ.

ಇದರಿಂದ ನೊಂದ ನಿಸರ್ಗಾ ಡೆತ್ ನೋಟ್ ಬರೆದು ಇಲಿ ಪಾಷಾಣ ತೆಗೆದುಕೊಂಡಿದ್ದಾಳೆ. ಕೂಡಲೆ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ನಿಸರ್ಗಾ ಸಾವನ್ನಪ್ಪಿದ್ದಾಳೆ. ಇನ್ನು ನಿಸರ್ಗಾ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಆರೋಪಿ ಸುಹಾಸ್​​ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸುಹಾಸ್, ಹಾಗೂ ಇತ್ತೀಚಿಗೆ ಪರಿಚಯವಾದ ಯುವತಿ ಪೋಷಕರು ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು