Categories: ಮೈಸೂರು

ನಂಜನಗೂಡು: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ನಂಜನಗೂಡು: ತಾಲೂಕಿನ ಅಳಗಂಚಿಪುರ ಗ್ರಾಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟ ನಡೆದಿದೆ.

ರಾಜ್ಯದಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ವರುಣ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಳಗಂಚಿಪುರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಹೊಡೆಯುವಾಗ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿವೆ. ಇದರಿಂದ ಯಾರಿಗೂ ಗಾಯಗಳಾಗಿಲ್ಲ, ವಿಷಯ ತಿಳಿದು ಸ್ಥಳಕ್ಕೆ ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರು ಪಟಾಕಿ ಸಿಡಿಸಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ashika S

Recent Posts

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ : ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ…

34 mins ago

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

56 mins ago

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…

1 hour ago

ಮಲೆನಾಡ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೇರಿಕಾದ ಆಟಗಾರ

ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…

2 hours ago

ಖೂಬಾ ಲಿಂಗಾಯತ ಹೋರಾಟದ ವಿರೋಧಿ : ಓಂಪ್ರಕಾಶ ರೊಟ್ಟೆ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ವಿರೋಧಿಯಾಗಿದ್ದು, ಲಿಂಗಾಯತ ಧರ್ಮೀಯರು ಲೋಕಸಭೆ ಚುನಾವಣೆಯಲ್ಲಿ ಅವರನ್ನು…

2 hours ago

ಜೆಡಿಎಸ್‌ ತೆನೆಹೊತ್ತ ಮಹಿಳೆ ಚಿಹ್ನೆ ಬದಲಿಸಲಿ : ಬಾಬುರಾವ್‌ ಪಾಸ್ವಾನ್‌

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಗ ಎಚ್‌.ಡಿ.ರೇವಣ್ಣ, ಅವರ ಮೊಮ್ಮಗ ಪ್ರಜ್ವಲ್‌ ರೇವಣ್ಣನ ಕರ್ಮಕಾಂಡಗಳಿಂದ ರಾಜ್ಯದ ಮಾನ ಹರಾಜಾಗಿದೆ. ಸಾವಿರಾರು ಮಹಿಳೆಯರ…

2 hours ago