Categories: ಮೈಸೂರು

ನಂಜನಗೂಡು: ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ

ನಂಜನಗೂಡು: ನಗರದ ತಾಲ್ಲೂಕು ಆಡಳಿತ ಭವನದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ನಡೆಸಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ , ಜಿಲ್ಲಾಧಿಕಾರಿ ಡಾ. ರಾಜೇಂದ್ರ ಮಾತನಾಡಿ, ಮಳೆಯ ಮುಂಜಾಗ್ರತಾ ವಾಗಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು. ಮುಂಗಾರು ಮಳೆ ಪ್ರಾರಂಭವಾಗಿದೆ ರೈತರಿಗೆ ಬಿತ್ತನೆ ಬೀಜ ತಲುಪಬೇಕು. ಬೆಳೆಗಳಿಗೆ ಸರಿಯಾದ ಸಂದರ್ಭದಲ್ಲಿ ಔಷಧಿ ವಿತರಣೆ ಆಗಬೇಕು ‌. ಮಳೆ ಬಂದು ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ವಿಮೆ ಬೆಳೆ ಪರಿಹಾರ ನೀಡಬೇಕು. ಮಳೆಯಿಂದ ಮನೆ ಕುಸಿತವಾದರೆ ತಕ್ಷಣವೇ ತಾಲ್ಲೂಕು ಆಡಳಿತ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕು ಎಂದು ಸೂಚಿಸಿದರು.

ಶಾಲೆ ಕಾಲೇಜುಗಳು ಪ್ರಾರಂಭವಾಗಿದ್ದು, ಸೂಕ್ತವಾಗಿ ಕೊಠಡಿ ನಿರ್ಮಾಣವಾಗಿರಬೇಕು , ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕ ತುರ್ತು ಕರೆ ನಿಗಮ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Ashika S

Recent Posts

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

6 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

24 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

42 mins ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

54 mins ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

1 hour ago

13 ವರ್ಷದ ಬಾಲಕಿ ಜೊತೆ 70ರ ವೃದ್ಧ ಮದುವೆ: ತಂದೆ, ವರ ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯನ್ನು  70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

2 hours ago