News Karnataka Kannada
Friday, May 03 2024
ಮೈಸೂರು

ನಂಜನಗೂಡು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

Farmers stage protest demanding release of water to canals
Photo Credit : News Kannada

ನಂಜನಗೂಡು: ನಗರದ ಕಾವೇರಿ ನೀರಾವರಿ ನಿಗಮದ ಕಚೇರಿಯ ಮುಂದೆ ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ರೈತನಾಯಕ ಪ್ರೊ. ಎಂ.ಡಿ ನಂಜುಂಡಸ್ವಾಮಿ ರವರ 87ನೇ ಜಯಂತೋತ್ಸವದ ಅಂಗವಾಗಿ ನಮನವನ್ನು ಸಲ್ಲಿಸಿ ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ಮುಂಬರುವ ಬೇಸಿಗೆಯಲ್ಲಿ ಭತ್ತ ಬೆಳೆಯಲು ನಾಲೆಗಳಿಗೆ ನೀರು ಬಿಡಬೇಕು ಎಂದು ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಿಲ್ಲ ಗೇಟ್ಗಳನ್ನು ಅಳವಡಿಸಿ ರೈತರಿಗೆ ಭತ್ತ ಬೆಳೆಯಲು ನೀರು ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ.

ನಮ್ಮ ರಾಜ್ಯದ ರೈತರಿಗೆ ನೀರನ್ನು ಬಿಡುತ್ತಿಲ್ಲ ಪಕ್ಕದ ತಮಿಳುನಾಡು ಅಲ್ಲಿಗೆ ನೀರು ಬಿಡಲು ಅಧಿಕಾರಿಗಳು ಹೊರಟಿದ್ದಾರೆ ಇದು ಖಂಡನೀಯ.
ಕೂಡಲೆ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು