News Karnataka Kannada
Friday, May 03 2024
ಮೈಸೂರು

ನಂಜನಗೂಡು: 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ವಿಶೇಷ ಚೇತನರಿಗೆ ಮನೆ ಮತದಾನ

Home voting for elderly persons above 80 years of age and differently-abled persons
Photo Credit : News Kannada

ನಂಜನಗೂಡು: ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ವಿಶೇಷ ಚೇತನರಿಗೆ ಮನೆಮನೆ ಮತದಾನ ನಡೆಸಲಾಯಿತು.

ನಂಜನಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಹಾಗೂ ಚುನಾವಣಾ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಬ್ಯಾಲೆಟ್ ಪೇಪರ್ ಮೂಲಕ 80 ವರ್ಷ ಮೇಲ್ಪಟ್ಟವರಿಗೆ ಮತದಾನ ಮಾಡಿಸಲಾಯಿತು.

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮನೆ ಮನೆ ಮತದಾನ ಹಮ್ಮಿಕೊಳ್ಳಲಾಗಿದ್ದು, ಕ್ಷೇತ್ರದಲ್ಲಿ ಈಗಾಗಲೇ 400ಕ್ಕೂ ಹೆಚ್ಚು 80 ವರ್ಷ ಮೇಲ್ಪಟ್ಟವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಇನ್ನು ಎರಡು ಮೂರು ದಿನಗಳ ಕಾಲ ಎರಡನೇ ಹಂತದಲ್ಲೂ ಮತದಾನ ಮಾಡಿಸಲಾಗುವುದು. ಇಂದು ಕ್ಷೇತ್ರದಲ್ಲಿ 16ಕ್ಕೂ ಹೆಚ್ಚು ಗ್ರಾಮಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯ ಜೊತೆಗೆ ಮನೆ ಮನೆಗೆ ಭೇಟಿ ನೀಡಿ ಮತದಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಶೇಕಡ 100ರಷ್ಟು ಮತದಾನ ಮಾಡಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು