ನಂಜನಗೂಡು : ನಂಜನಗೂಡು ಪೊಲೀಸರು ತೆಗೆದುಕೊಳ್ಳುವ ಕಾನೂನು ಬದ್ಧವಾದ ನಿರ್ಧಾರಗಳಿಗೆ ಮತ್ತು ಕ್ರಮಗಳಿಗೆ ರೈತ ಸಂಘಟಕರು ಜೊತೆಯಲಿರುತ್ತೇವೆ ಶಾಂತಿಯ ಗೂಡಾಗಿರುವ ನಂಜನಗೂಡಿನಲ್ಲಿ ನಡೆಯುವ ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ ಎಂದು ಪೊಲೀಸ್ ಭವನದಲ್ಲಿ ಇಂದು ನಡೆದ ಸಭೆಯಲ್ಲಿ ರೈತ ಸಂಘದ ಮುಖಂಡರು ನಂಜನಗೂಡು ಪೊಲೀಸರಿಗೆ ಸಾಮೂಹಿಕವಾಗಿ ಸಹಕಾರ ವ್ಯಕ್ತಪಡಿಸಿದರು.
ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಮತ್ತು ನಂಜನಗೂಡಿನ ಡಿವೈಎಸ್ಪಿ ರಘು ರವರ ಆದೇಶದ ಮೇರೆಗೆ ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್, ರವೀಂದ್ರ , ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ಸಂಘಟನೆಯ ಮುಖಂಡರು ಕಾರ್ಯಕರ್ತರು ಮತ್ತು ಪೊಲೀಸ್ ಇಲಾಖೆಯ ಜೊತೆಗೂಡಿ ಪೊಲೀಸ್ ಭವನದಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಸಭೆಯಲ್ಲಿ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ನಂಜನಗೂಡು ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರನ್ನು ಬೆಚ್ಚಿ ಬೆಳಿಸುವ ಕೃತ್ಯಗಳು ನಡೆಯುತ್ತಿದೆ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾದ ವಾಸನೆ ಬೀರುತ್ತಿದೆ. ಹಾಡು ಹಗಲೇ ದರೋಡೆಗಳು ನಡೆದು ಚಿನ್ನಾಭರಣಗಳನ್ನು ಖದೀಮರು ದೋಚುತ್ತಿದ್ದಾರೆ.
ಟ್ರಾಫಿಕ್ ಸಮಸ್ಯೆ ಎದುರಾಗಿದೆ ಇದಕ್ಕೆಲ್ಲ ನಂಜನಗೂಡು ಪೊಲೀಸರು ಕಠಿಣವಾಣ ನಿರ್ಧಾರಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ಮತ್ತು ನೆಮ್ಮದಿ ಜೀವನ ನಡೆಸುವ ಶಾಂತಿಯುತ ವಾತಾವರಣಕ್ಕೆ ಅವಕಾಶ ಮಾಡಿಕೊಡಬೇಕು ಕಾನೂನು ಬದ್ಧವಾಗಿ ಮತ್ತು ಕಠಿಣವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ನಂಜನಗೂಡು ಪೊಲೀಸರ ಜೊತೆಗೆ ರೈತ ಸಂಘ ಸದಾ ನಿಲ್ಲುತ್ತದೆ ಎಂದು ಹೇಳಿದರು.
ಈಗಾಗಲೇ ಸಾಕಷ್ಟು ಸಮಸ್ಯೆಗಳ ಬಗ್ಗೆ ತಿಳಿ ಹೇಳಿದ್ದಾರೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮತ್ತು ಕಿಡಿಗೇಡಿಗಳ ಕೃತ್ಯಕ್ಕೆ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗುತ್ತೇವೆ.
ಇತ್ತೀಚಿನ ದಿನಗಳಲ್ಲಿ ನಡೆದಿರುವ ಕಿಡಿಗೇಡಿಗಳ ಕೃತ್ಯಕ್ಕೆ ಕಡಿಮಣ ಹಾಕಲು ಈಗಾಗಲೇ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನಿತರ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದೇವೆ. ಟ್ರಾಫಿಕ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತೇವೆ ಎಂದು ಪಟ್ಟಣ ಠಾಣೆಯ ಇನ್ಸ್ಪೆಕ್ಟರ್ ಸಿಎಂ ರವೀಂದ್ರ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್ , ಜಿಲ್ಲಾ ಕಾರ್ಯದರ್ಶಿ ಇಮ್ಮವು ರಘು, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಸೇರಿದಂತೆ ರೈತ ಸಂಘದ ಮುಖಂಡರು ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

