ನಂಜನಗೂಡು: ನಂಜನಗೂಡು ತಾಲ್ಲೂಕು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಜೊತೆಗೂಡಿ ವೃತ ನಿರೀಕ್ಷಕ ಚಂದ್ರಶೇಖರ್ ಮತ್ತು ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಸಭೆ ನಡೆಸಿದ್ದಾರೆ.
ಇದು ನಿಮ್ಮ ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಕುಟುಂಬಗಳು ಗ್ರಾಮವನ್ನು ತೊರೆದಿರುವ ಬಗ್ಗೆ ವರದಿಯನ್ನು ಮಾಡಲಾಗಿತ್ತು ಇದರಿಂದ ಎಚ್ಚೆತ್ತುಕೊಂಡಿರುವ ತಾಲ್ಲೂಕು ಆಡಳಿತ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಗಳ ನೂರಾರು ಕುಟುಂಬಗಳಿಗೆ ನೀಡಿರುವ ಸಾಲದ ವಿವರವನ್ನು ಮಾಹಿತಿ ಪಡೆಯಲಾಗಿದೆ. ನಿಮ್ಮ ಕಿರುಕುಳ ತಾಳಲಾರದೆ ನೀವು ಸಾಲ ನೀಡಿದ ಎಷ್ಟು ಕುಟುಂಬಗಳು ಬೀದಿಗೆ ಬಿದ್ದಿವೆ ಮನೆಯನ್ನು ತೊರೆದು ನಾಪತ್ತೆಯಾಗಿದ್ದಾರೆ ?.
ಖಾಸಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಗೆ ಹತ್ತು ಹಲವು ಪ್ರಶ್ನೆಗಳ ಸುರಿಮಳೆಗೈದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳನ್ನು ಪೊಲೀಸರು ತರಾಟೆಗೆ ತೆಗೆದುಕೊಂಡರು. ಪೊಲೀಸರ ಖಡಕ್ ಎಚ್ಚರಿಕೆಗೆ ತಬ್ಬಿಬಾದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಯಾವುದೇ ಉತ್ತರ ನೀಡದೆ ಮೌನಕ್ಕೆ ಶರಣಾಗಿದ್ದಾರೆ. ಕಿರುಕುಳ ನೀಡುವುದು ಕಂಡು ಬಂದರೆ ನಿಮ್ಮ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಭೆಯಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್ ಪಿಎಸ್ಐ ಚೇತನ್ ಕುಮಾರ್ ದಫೆದರ್ ದೊಡ್ಡಯ್ಯ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಇದು ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯ ಫಲಶೃತಿಯಾಗಿದೆ.