News Karnataka Kannada
Friday, May 10 2024
ಮೈಸೂರು

ನಂಜನಗೂಡು: ಹಾಡ ಹಗಲೇ ಯುವಕನ ಹತ್ಯೆ, ಆರೋಪಿಯ ಬಂಧನ

Attempt to sell ganja near Guruvayanakere school: Two arrested
Photo Credit : News Kannada

ನಂಜನಗೂಡು: ಹಾಡು ಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, 27 ವರ್ಷದ ಮಹೇಶ್ ಮೃತ ಯುವಕನಾಗಿದ್ದಾನೆ. ಮಹೇಶ್ ಎಂಬಾತ ಆಟೋದಲ್ಲಿ ಕುಳಿತಿರುವುದನ್ನು ನೋಡಿದ 32 ವರ್ಷದ ಗಿರೀಶ್ ಎಂಬಾತ ಏಕಾಏಕಿ ಆಟೋದಲ್ಲಿ ಕುಳಿತಿದ್ದ ಮಹೇಶ್ ನಿಗೆ ಮಚ್ಚಿನಿಂದ ಹಲ್ಲೆ ನಡೆಸಿ ತಲೆಗೆ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ.

ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಮಹೇಶನನ್ನು ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ಫಲಕಾರಿಯಾಗಿದೆ ಮಹೇಶ್ ಸಾವನ್ನಪ್ಪಿದ್ದಾನೆ. ಮಹೇಶ್ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅದೇ ಗ್ರಾಮದಲ್ಲಿ ಆರೋಪಿ ಗಿರೀಶ್ ಕೂಡ ಕಟಿಂಗ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ತಕ್ಷಣ ಮಾಹಿತಿ ತಿಳಿದ ಹುಲ್ಲಹಳ್ಳಿ ಪೊಲೀಸರು ಹಾಗೂ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆರೋಪಿ ಗಿರೀಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ವೃತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿ ಕಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು