ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ಚಿಕ್ಕಜಾತ್ರಾ ಮಹೋತ್ಸವವು ಡಿ.4-2025 ರಂದು ಜರುಗಲಿದೆ.
ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಡಿ.1 ರಂದು ಸೋಮವಾರ ಸಂಜೆ 7 ಗಂಟೆಗೆ ಶ್ರೀಕಂಠಮುಡಿ ಉತ್ಸವ, ಡಿ. 4 ರಂದು ಗುರುವಾರ ಬೆಳಿಗ್ಗೆ 9:00 ರಿಂದ 9 ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ರಥೋತ್ಸವ ಜರುಗಲಿದ್ದು, ಡಿ. 6 ರಂದು ಶನಿವಾರ ಸಂಜೆ 7 ಗಂಟೆಗೆ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ತೆಪ್ಪೋತ್ಸವ ನಡೆಯಲಿದೆ.
ನಂಜನಗೂಡು ಚಿಕ್ಕಜಾತ್ರಾ ಮಹೋತ್ಸವಕ್ಕೆ ಭಕ್ತಾದಿಗಳು ಕುಟುಂಬ ಸಮೇತವಾಗಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕೆಂದು ಕೋರಿದ್ದಾರೆ. ಸರ್ವರಿಗೂ ಸ್ವಾಗತ ಕೋರುವವರು ಕರ್ನಾಟಕ ಸರ್ಕಾರ, ಧಾರ್ಮಿಕ ದತ್ತಿ ಇಲಾಖೆ, ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದ ಆಡಳಿತ ವರ್ಗ ನಂಜನಗೂಡು.
