Bengaluru 29°C
Ad

ನಂಜನಗೂಡು: ಸುತ್ತೂರು ಗ್ರಾಮದ ಶಾಲಾ ದಾಖಲಾತಿ ಆಂದೋಲನಕ್ಕೆ ಚಾಲನೆ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 ಮತ್ತು 25 ನೇ ಸಾಲಿನ ಮಕ್ಕಳ ಶಾಲಾ ದಾಖಲಾತಿ ಆಂದೋಲನಕ್ಕೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಪಾರ್ವತಿ ಚಾಲನೆ ನೀಡಿದರು.

ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 ಮತ್ತು 25 ನೇ ಸಾಲಿನ ಮಕ್ಕಳ ಶಾಲಾ ದಾಖಲಾತಿ ಆಂದೋಲನಕ್ಕೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಪಾರ್ವತಿ ಚಾಲನೆ ನೀಡಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥ ನಡೆಸಿ, ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳು ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿ ಎಂದು ಅರಿವು ಮೂಡಿಸಿದರು.

ಇನ್ನೂ ಶಾಲೆಗೆ ದಾಖಲಾದ ಮಕ್ಕಳಿಗೆ ಸಿಹಿ ಹಂಚಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಪಿ.ನಾಗರಾಜು, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರ ರವಿ, ಸದಸ್ಯರಾದ ಬಸವರಾಜು ಮಹದೇವಯ್ಯ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

Ad
Ad
Nk Channel Final 21 09 2023
Ad