ನಂಜನಗೂಡು: ರಾಷ್ಟ್ರೀಯ  ಹಬ್ಬಗಳ ಆಚರಣೆ ಸಮಿತಿಯಿಂದ ತಾಲ್ಲೂಕು  ಆಡಳಿತ ಭವನದಲ್ಲಿ  ಮಾಜಿ ಮುಖ್ಯಮಂತ್ರಿ  ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜು ಅರಸು ರವರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ತಾಲ್ಲೂಕು ದಂಡಾಧಿಕಾರಿ ಶಿವಕುಮಾರ್ ಕಾಸ್ನೂರು ಮಾತನಾಡಿ. ಡಿ.ದೇವರಾಜ ಅರಸುರವರು ಸಮಾಜದಲ್ಲಿ ಒಬ್ಬ ಮಾದರಿ ವ್ಯಕ್ತಿಯಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ತಮ್ಮ ಆಡಳಿತ ನಡೆಸಿದ್ದಾರೆ. ಅವರ ಜೀವನ ಶೈಲಿಯು ನಮಗೆ ಮಾದರಿಯಾಗಿದೆ. ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕಂದಾಯ ಇಲಾಖೆಗೆ ಹಲವಾರು ಕೊಡುಗೆ ನೀಡಿದ್ದಾರೆ .

ಭೂ ಸುಧಾರಣೆ ಕಾಯ್ದೆ, ಉಳುವನಿಗೆ ಭೂ ಒಡೆತನದ ಹಕ್ಕು ಮುಂತಾದ ಕಾಯಿದೆಗಳನ್ನು ರಾಜ್ಯದಲ್ಲಿ ಜಾರಿಗೆ ತಂದರು. ಈ ಕಾಯ್ದೆಗಳಿಂದ ಜನಸಾಮಾನ್ಯರ ಜೀವನಮಟ್ಟ ಸುಧಾರಿಸಿದೆ . ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಯಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸುಧಾರಣೆಗೂ ಕಾರಣಿಭೂತರಾಗಿದ್ದಾರೆ ಎಂದು ತಿಳಿಸಿದರು.

ಇನ್ನೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ವಿವಿಧ ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.