ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಮಾಜಿ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ವೇದಿಕೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ತಗಡೂರು ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಶಾಸಕರ ನಿಧಿಯಿಂದ 20 ಲಕ್ಷ ರೂ ಅನುದಾನವನ್ನು ನೀಡಲಾಗಿತ್ತು.
ನಂತರ ಸದಾನಂದ ರವರು 10 ಲಕ್ಷ ರೂಗಳನ್ನು ನೀಡಿದ್ದರು. ಈ ಅನುದಾನ ಕೊರತೆಯಾದ ಕಾರಣ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿತ್ತು ಇದನ್ನು ಮನಗಂಡು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಟಿ.ಎನ್ ಗುರುಮಲ್ಲೇಶ್ ರವರು ತಮ್ಮ 3 ಎಕರೆ 10 ಗುಂಟೆ ಜಮೀನನ್ನು 20 ಲಕ್ಷ ರೂಪಾಯಿಗಳಿಗೆ ಅಡ ಇಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಟಿ.ಎನ್ ಗುರುಮಲ್ಲೇಶ್ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಚಂದ್ರವತಿ ಬಸವರಾಜ್, ಗ್ರಾಪಂ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎನ್ ಗುರುಮಲ್ಲೇಶ್, ಉಪಾಧ್ಯಕ್ಷ ಜಯಪ್ರಕಾಶ್, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜು,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಕಾಂಗ್ರೆಸ್ ಮುಖಂಡರಾದ ಆರ್. ಮಹದೇವ್, ಗಾರ್ಡನ್ ಮಹೇಶ್, ಶಿವರಾಂ, ಗ್ರಾಪಂ ಸದಸ್ಯರಾದ ಸಂಗೀತ, ಸರಸ್ವತಿ, ಚಿಕ್ಕಸ್ವಾಮಿ, ಅನಿತಾ, ದೇವರಾಜಮ್ಮ, ಕುಮಾರ್, ಮಣಿ, ಬೆಡ್ಡಿನ ಮಾದಶೆಟ್ಟಿ, ಕಾಂತರಾಜ್, ರವಿಶಂಕರ್, ಪಿಡಿಒ ಬಸವಣ್ಣ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ನಾಗಪ್ಪ ಪಟೇಲ್, ಶ್ರೀನಿವಾಸ ನಾಯಕ, ನಟರಾಜು, ಸುಬ್ಬಪ್ಪ, ದೇವರಾಜು, ಮುದ್ದುಮಾದೇಗೌಡ, ನಟೇಶ್, ರಂಗ ಶೆಟ್ಟಿ, ನಾಗಮ್ಮ, ರತ್ನಮ್ಮ, ಶಿವಲಿಂಗೇಗೌಡ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹದೇವಪ್ಪ, ಸುಭಿಕ್ಷ ಸೇರಿದಂತೆ ಹಲವರು ಭಾಗವಹಿಸಿದ್ದರು.

