ಮೈಸೂರು: ಮೈಸೂರು ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೋಮ್ ಸ್ಟೇ ಗಳು ಹಳ್ಳಿಗಳ ರೀತಿಯ ಅನುಭವ ನೀಡುವ ತಾಣಗಳು. ಹೋಮ್ ಸ್ಟೇಗಳಲ್ಲಿ 5 ರೂಮ್ ಗಳು ಮಾತ್ರ ಇರಬೇಕು. ನಗರ ಪ್ರದೇಶಗಳಲ್ಲಿ ಹೋಟೆಲ್‌ಗಳನ್ನು ಹೋಮ್ ಸ್ಟೇ ಗಳಾಗಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಅವರು ಅಲ್ಲೇ ವಾಸವಿದ್ದು 5ಕ್ಕಿಂತ ಕಡಿಮೆ ರೂಮ್‌ಗಳನ್ನು ನಿರ್ಮಿಸಿಕೊಂಡಿದ್ದರೆ ಇದಕ್ಕೆ ಯಾವುದೇ ಕನ್ವರ್ಷನ್ ಬೇಕಿಲ್ಲ ಎಂದು ಎನ್‌ ಓಸಿ ನೀಡಲು ಮಹಾನಗರ ಪಾಲಿಕೆ ಆಯುಕ್ತರಿಗೆ ತಿಳಿಸಿದರು.

ವರುಣಾ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಟೆಂಡರ್ ನೀಡಲಾಗಿದೆ. ಅದೇ ರೀತಿ ಜಿಲ್ಲೆಯ ಕೆರೆಗಳಲ್ಲಿ ಪ್ರವಾಸಿ ಬೋಟಿಂಗ್ ವ್ಯವಸ್ಥೆ ಮಾಡಲು ಸಾಧ್ಯತೆ ಇರುವ ಎರಡು ಮೂರು ಕೆರೆಗಳನ್ನು ಗುರುತಿಸುವಂತೆ ಪ್ರವಾಸೋದಮ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಪ್ರವಾಸೋಧ್ಯಮ ಇಲಾಖೆ ಜಂಟಿ ನಿರ್ದೇಶಕ ಎಂ.ಕೆ.ಸವಿತಾ ಮಾತನಾಡಿ, ಹೊಮ್ ಸ್ಟೆ ಗಳು ವಾಣಿಜ್ಯ ಉದ್ಯಮಗಳಲ್ಲ. ಕೇಂದ್ರ ಪ್ರವಾಸೋದಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಸೆಲ್ಪಿ ಪಾಯಿಂಟ್, ಮಾಹಿತಿ ಫಲಕ ಅಳವಡಿಸಲಾಗುತ್ತಿದೆ. ಮೈಸೂರಿನ ಅಧಿಕೃತ ಲೋಗೋವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಇತರೆ ಕ್ಷೇತ್ರಗಳಲ್ಲಿ ಅಗತ್ಯವಾಗಿ ಬಳಸಬೇಕು ಎಂದು ತಿಳಿಸಿದರು.

ವರುಣಾ ಕೆರೆಯಲ್ಲಿ ಸಾಹಸ ಕ್ರೀಡೆ ಹಾಗೂ ಸದರಿ ಸ್ಥಳಗಳಲ್ಲಿ ಜಿಪ್ ಲೈನ್, ಸ್ಕೈ ಸೈಕಲ್ ಮತ್ತು ಜಾಯಿಂಟ್ ಸ್ವಿಂಗ್ ಎಂಬ ಹೆಚ್ಚುವರಿ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದ ಅವರು ಪ್ರವಾಸೋದಮ ಇಲಾಖೆಯ ಸಾಮಾಜಿಕ ಜಾಲತಾಣವನ್ನು ಉನ್ನತ ಮಟ್ಟಕ್ಕೆ ಏರಿಸಲು ನೇರ ಪಾಲುದಾರರು ಅಥವಾ ಖಾಸಗಿ ಸಹಭಾಗಿತ್ವ ಪಡೆಯಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ್ ದರ್ಶನ 2.0 ಅಡಿಯಲ್ಲಿ ಮೈಸೂರಿನ ಫೇಸ್ 1ರಲ್ಲಿ ಮೃಗಾಲಯ ಹಾಗೂ ಕಾರಂಜಿ ಕೆರೆ ಒಳಗೊಂಡಂತೆ ಟಾಂಗಾ ರೈಡ್, ಎಕೋಲಾಜಿಕಲ್ ಎಕ್ಸ್ ಫೀರಿಯನ್ಸ್ ಸಂಬಂಧ ಡಿಪಿಆರ್ ಸಲ್ಲಿಕೆಯಾಗಿದ್ದು ಟೆಂಡರ್ ಕರೆಯಲಾಗಿದೆ. ಸ್ವದೇಶ ದರ್ಶನ್ ಯೋಜನೆಯ 2ನೇ ಹಂತದಲ್ಲಿ ನಗರದ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತನೆ ಮಾಡಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಡಿಪಿಆರ್ ಸಲ್ಲಿಸಿದ್ದು ಅಂತಿಮ ಅನುಮೋದನೆ ಹಾಗೂ ಅನುದಾನ ಬಿಡುಗಡೆಗೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ ವಿವೇಕಾನಂದ, ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್, ಡಿಸಿಎಫ್ ಡಾ.ಕೆ.ಎನ್.ಬಸವರಾಜು, ಡಿಸಿಪಿ ಮುತ್ತುರಾಜ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಜಿಎಸ್‌ಎಸ್ ಯೋಗ ಸಂಸ್ಥೆಯ ಶ್ರೀಹರಿ, ಗೈಡ್ಸ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.