ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನಿಸಿ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಬುಲೆರೋ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ದುಷ್ಕರ್ಮಿಗಳು ಮೊದಲು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಎಂಟ್ರಿಕೊಟ್ಟಿದ್ದಾರೆ. ಚಿನ್ನಾಭರಣಗಳನ್ನ ತೋರಿಸುವಂತೆ ಮಾತುಕತೆ ನಡೆಸಿದ ಬಳಿಕ, ಅಂಗಡಿಯೊಳಗೆ ಇದ್ದ ಇಬ್ಬರು ಅಪರಿಚಿತರು ಏಕಾಏಕಿ ಗನ್‌ಗಳನ್ನ ಹೊರತೆಗೆದು ದಾಳಿ ನಡೆಸಿದ್ದಾರೆ.

View this post on Instagram

A post shared by News Karnataka (@newskarnataka)