ನಂಜನಗೂಡು: ನಂಜನಗೂಡು ತಾಲ್ಲೂಕಿನ ಕವಲಂದೆ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಬಿ.ಬಸವರಾಜು ಅಧಿಕಾರ ಸ್ವೀಕರಿಸಿದರು. ನೂತನ ಪಿಎಸ್ಐ ಬಿ.ಬಸವರಾಜು ರವರನ್ನು ಕವಲಂದೆ ಪೊಲೀಸ್ ಠಾಣಾ ಸಿಬ್ಬಂದಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.
ಈ ಹಿಂದೆ ಪಿಎಸ್ಐಯಾಗಿದ್ದ ಕೃಷ್ಣಕಾಂತ ಕೋಳಿ ರವರಿಗೆ ಯಾವುದೇ ಸ್ಥಳ ತೋರಿಸಿಲ್ಲ. ಸೋಮವಾರ ರಾತ್ರಿ 7 ಗಂಟೆಯ ಸಮಯದಲ್ಲಿ ನೂತನ ಪಿಎಸ್ಐ ಬಿ. ಬಸವರಾಜು ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಲ್ಲ. ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮ ಮಧ್ಯ ಮಾರಾಟ, ಜೂಜಾಟ, ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಜೂಜಾಟ, ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗುತ್ತದೆ.
ಅಕ್ರಮ ಮಧ್ಯ ಮಾರಾಟ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ತಿಂಗಳು ಎಸ್ಸಿ, ಎಸ್ಟಿ ಕುಂದು ಕೊರತೆ ಸಭೆಯನ್ನು ನಡೆಸಲಾಗುತ್ತದೆ. ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಬಹುದು.
ಕಾನೂನು ಸುವ್ಯವಸ್ಥೆ ಕಾಪಾಡಲು ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ದಕ್ಷ ಮತ್ತು ಪ್ರಾಮಾಣಿಕತೆಯಿಂದ ನಾವು ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಿ.ಪಿ.ರಮೇಶ್, ಚಂದ್ರು, ಗಣೇಶ್, ಮಂಜು, ಶಿವು ಹಾಜರಿದ್ದರು.