News Karnataka Kannada
Monday, May 20 2024
ಮೈಸೂರು

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ನ್ಯೂಸ್ ಕರ್ನಾಟಕ ವರದಿಯ ಫಲಶೃತಿಯಾಗಿದೆ.
Photo Credit : NewsKarnataka

ಮೈಸೂರು: ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ನ್ಯೂಸ್ ಕರ್ನಾಟಕ ವರದಿಯ ಫಲಶೃತಿಯಾಗಿದೆ.

ಸುಮಾರು ಹತ್ತು ವರ್ಷಗಳಿಂದ ಚರಂಡಿಯ ವ್ಯವಸ್ಥೆ ಸರಿಯಿಲ್ಲದೆ ನೀರು ಸರಾಗವಾಗಿ ಹರಿಯದೆ ನಿಂತಲ್ಲೇ ನಿಂತು ಗಬ್ಬೆದ್ದು ನಾರುತಿತ್ತು. ಸಾಂಕ್ರಾಮಿಕ ರೋಗಗಳು ಹರಡುವ ಬೀದಿಯಲ್ಲಿ ಗ್ರಾಮಸ್ಥರಿದ್ದರು. ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರು ಒತ್ತಾಯವನ್ನು ಮಾಡಿದ್ದರು. ಈ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ ಪರಿಣಾಮ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಸಮಸ್ಯೆಯನ್ನ ಆಲಿಸಿದ್ದಾರೆ.

ಇಷ್ಟೆಲ್ಲ ಸಮಸ್ಯೆಗಳಿದ್ದರೂ ದೇವರಸನಹಳ್ಳಿ ಗ್ರಾಮ ಪಂಚಾಯಿತಿಗೆ ಪಿಡಿಓ ಮತ್ತು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇನ್ನೆರಡು ದಿನದಲ್ಲಿ ಚರಂಡಿ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ನಿರ್ದೇಶನ ನೀಡುತ್ತೇನೆ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ತಿಳಿಸಿದ್ದಾರೆ.
ಇದು ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು