Categories: ಮೈಸೂರು

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಮೈಸೂರು: ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ನ್ಯೂಸ್ ಕರ್ನಾಟಕ ವರದಿಯ ಫಲಶೃತಿಯಾಗಿದೆ.

ಸುಮಾರು ಹತ್ತು ವರ್ಷಗಳಿಂದ ಚರಂಡಿಯ ವ್ಯವಸ್ಥೆ ಸರಿಯಿಲ್ಲದೆ ನೀರು ಸರಾಗವಾಗಿ ಹರಿಯದೆ ನಿಂತಲ್ಲೇ ನಿಂತು ಗಬ್ಬೆದ್ದು ನಾರುತಿತ್ತು. ಸಾಂಕ್ರಾಮಿಕ ರೋಗಗಳು ಹರಡುವ ಬೀದಿಯಲ್ಲಿ ಗ್ರಾಮಸ್ಥರಿದ್ದರು. ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರು ಒತ್ತಾಯವನ್ನು ಮಾಡಿದ್ದರು. ಈ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಿದ ಪರಿಣಾಮ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಸಮಸ್ಯೆಯನ್ನ ಆಲಿಸಿದ್ದಾರೆ.

ಇಷ್ಟೆಲ್ಲ ಸಮಸ್ಯೆಗಳಿದ್ದರೂ ದೇವರಸನಹಳ್ಳಿ ಗ್ರಾಮ ಪಂಚಾಯಿತಿಗೆ ಪಿಡಿಓ ಮತ್ತು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇನ್ನೆರಡು ದಿನದಲ್ಲಿ ಚರಂಡಿ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ನಿರ್ದೇಶನ ನೀಡುತ್ತೇನೆ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ತಿಳಿಸಿದ್ದಾರೆ.
ಇದು ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.

Nisarga K

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

12 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

38 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

46 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago