ನಂಜನಗೂಡು: ಮಾ.30 ರಂದು ನಡೆಯುವ ಐತಿಹಾಸಿಕ ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ರಥೋತ್ಸವದ ವೇಳೆ ಡ್ರೋನ್ ಕ್ಯಾಮೆರಾಗಳ ಹಾರಾಟವನ್ನು ನಿಷೇಧಿಸಿ ಆದೇಶ ನೀಡಲಾಗಿದೆ.

ಶ್ರೀ ನಂಜುಂಡೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವ ನಡೆಯುವ ಸಂದರ್ಭದಲ್ಲಿ ಚಿತ್ರೀಕರಣ ಮಾಡಲು ಖಾಸಗಿ ಡ್ರೋನ್ ಕ್ಯಾಮೆರಾ ಗಳ ಹಾರಾಟ ಹೆಚ್ಚಾಗಿತ್ತು. ಇದನ್ನು ಮನಗಂಡು ಖಾಸಗಿ ಡ್ರೋನ್ ಕ್ಯಾಮೆರಾ ಉಪಯೋಗಕ್ಕೆ ಸಂಬಂಧಪಟ್ಟಂತೆ ಡ್ರೋನ್ ಕ್ಯಾಮೆರಾ ಗಳ ಹಾರಾಟವನ್ನು ಮೈಸೂರು ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ.

ಡ್ರೋನ್ ರೂಲ್ಸ್ ಕಾಯ್ದೆ ರೀತ್ಯಾ ನಿಷೇಧಿಸಲಾಗಿದ್ದು, ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಡೋನ್ ಕ್ಯಾಮೆರಾಗಳ ಹಾರಾಟ ಮಾಡತಕ್ಕದ್ದಲ್ಲ. ಒಂದು ವೇಳೆ ಕಾನೂನು ಉಲ್ಲಂಘಿಸಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಿಂದ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.