Bengaluru 20°C
Ad

ಬೆಂಬಲ ಬೆಲೆ ಪಡೆಯಲು ನೋಂದಣಿಗೆ ಸೂಚನೆ

ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆ ಇವರ ಮುಖಾಂತರ ನಡೆಯುತ್ತದೆ.

ಮೈಸೂರು: ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆ ಇವರ ಮುಖಾಂತರ ನಡೆಯುತ್ತದೆ. ಸರ್ಕಾರದ ಮಾನದಂಡಗಳ ಅನ್ವಯ ಎಫ್‌ಎಕ್ಯು ಗುಣಮಟ್ಟ ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.

Ad

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ರೈತರಿಂದ ಎಫ್‌ಎಕ್ಯು ಗುಣಮಟ್ಟದ ರಾಗಿ, ಭತ್ತ, ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 2300 ರೂ., ರಾಗಿ ಕ್ವಿಂಟಾಲ್‌ಗೆ 4290 ಇದ್ದು ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು ಎಂದರು.

Ad

ಸೂಕ್ತ ದಾಸ್ತಾನಿಗಾಗಿ ಭತ್ತ, ರಾಗಿ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟ ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತ, ರಾಗಿಯನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಸೂಚನೆ ನೀಡಿದರಲ್ಲದೆ, ಭತ್ತ, ರಾಗಿ ಖರೀದಿ ನೋಂದಣಿ ಪ್ರಾರಂಭವಾಗುವ ದಿನಾಂಕದ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡಬೇಕು. ರೈತರು, ನೊಂದಣಿ ಕೇಂದ್ರಗಳು, ಭತ, ರಾಗಿ ಖರೀದಿ ಕೇಂದ್ರಗಳ ಕುರಿತು ವಿವರ ನೀಡಬೇಕು ಎಂದರು

Ad

ಈ ವೇಳೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರವಿ, ವಾರ್ತಾಧಿಕಾರಿ ಹರೀಶ್, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿಗಳು, ಸೇರಿದಂತೆ ಇತರರು ಹಾಜರಿದ್ದರು.

Ad
Ad
Ad
Nk Channel Final 21 09 2023