ನಂಜನಗೂಡು: ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನಲ್ಲಿ ಮುಳುಗಿರುವುದು ಕಂಡುಬಂದಿದೆ.
ನಂಜನಗೂಡು ನಗರದ ವಾಲ್ಮೀಕಿ ಭವನದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕೆಡಿಪಿ ಸಭೆಯಲ್ಲಿ ರವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ವೀಕ್ಷಣೆಯಲ್ಲಿ ತೊಡಗಿದ್ದಾರೆ.
ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸುತ್ತಿದ್ದ ವೇಳೆ ಹಿಂದೆ ಕುಳಿತ್ತಿದ್ದ ಅಧಿಕಾರಿಗಳು ಮೊಬೈಲ್ ನಲ್ಲಿ ಮುಳುಗಿರುವುದು ಕಂಡು ಬಂತು. ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೇ ಕಾದು ನೋಡಬೇಕಿದೆ.

