ನಂಜನಗೂಡು: ಹಳೇ ದ್ವೇ ಷದ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿದ ನಾಲ್ವರು ವ್ಯಕ್ತಿಯ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಥಳಿಸಿ ನಾಪತ್ತೆಯಾದ ಘಟನೆ ನಂಜನಗೂಡು ತಾಲ್ಲೂಕು ಚೆನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ.

ಘಟನೆ ನಡೆದು ನಾಲ್ಕು ದಿನಗಳು ಕಳೆದರೂ ಹುಲ್ಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲವೆಂದು ಹಲ್ಲೆಗೊಳಗಾದ ವ್ಯಕ್ತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯಲ್ಲಿ ಶಿವರಾಜು(38) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.

ಸೋಮವಾರ ರಾತ್ರಿ ಇಬ್ಬರು ಮಹಿಳೆಯರು ಇಬ್ಬರು ಪುರುಷರು ಶಿವರಾಜು ಮನೆಯ  ಬಾಗಿಲು ತಟ್ಟಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆಯೇ ಮಹಿಳೆಯರು ಶಿವರಾಜ್ ಕಣ್ಣಿಗೆ ಖಾರದಪುಡಿ ಎರಚಿದ್ದಾರೆ. ನಂತರ ಪುರುಷರು ಮಾರಕಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಶಿವರಾಜ್  ಕೈಮೂಳೆ ಮುರಿದಿದೆ. ತಲೆಯ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದೆ. ಘಟನೆ ನಡೆದು ನಾಲ್ಕು ದಿನ ಕಳೆದರು ಹುಲ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲವೆಂದು ಆರೋಪಿಸಿದ್ದಾರೆ.

ಹುಲ್ಲಹಳ್ಳಿ ಪೊಲೀಸರ ನಿರ್ಲಕ್ಷ್ಯ ಧೋರಣೆಗೆ ಕುಟುಂಬಸ್ಥರು ಬೇಸತ್ತಿದ್ದಾರೆ. ಗಾಯಗೊಂಡಿರುವ ಶಿವರಾಜ್ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣವನ್ನು ದಾಖಲು ಮಾಡಿಕೊಂಡು ಅಲೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ನಮಗೆ ನ್ಯಾಯ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.