ಮೈಸೂರು: ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸಲ್ಪಟ್ಟಿರುವ ಪ್ರದೇಶಗಳನ್ನ ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.
ಸತತ ಮೂರು ವಾರಗಳಿಂದ ಮಳೆಯಾಗದೆ ಶೇ.60 ಕ್ಕಿಂತ ಕಡಿಮೆ ಆಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಒಂದು ವಾರದ ಒಳಗೆ ಅಗತ್ಯ ಪ್ರಸ್ತಾವನೆ ಪಡೆದು ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶಿಸಿದ್ದಾರೆ.

