News Karnataka Kannada
Friday, April 19 2024
Cricket
ಮೈಸೂರು

“ಯದುವೀರ್‌ ಒಡೆಯರ್‌” ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ!

Veer
Photo Credit : News Kannada

ಮೈಸೂರು: ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ.

ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್‌ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್‌ ಒಡೆಯರ್‌ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇನ್ನೊಂದೆಡೆ ರಾಜವಂಶಸ್ಥ ಯದುವೀರ್‌ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಡುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡಮಟ್ಟದ ಚರ್ಚೆ ನಡೆಯುತ್ತಿದೆ.

ಯದುವೀರ್‌ ಒಡೆಯರ್‌ ಅವರು ಅವರು ಚುನಾವಣೆಗೆ ಸ್ಪರ್ಧೆ ಮಾಡುವ ವಿಷಯದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿದಲ್ಲಿ ಚರ್ಚೆ ನಡೆಯುತ್ತಿದ್ದು, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ ಎನ್ನುವ ಪೋಸ್ಟರ್ ಅಭಿಯಾನ ಆರಂಭವಾಗಿದೆ.

“ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ” ಎಂದು ಮನವಿ ಮಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು